ಬಂಟ್ವಾಳ:  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಫ್ಟ್ ಸ್ಕಿಲ್ಸ್, ಪರಿಣಾಮಕಾರಿಯಾದ ಸಂವಹನ ಕೌಶಲ್ಯ, ನಾಯಕತ್ವ ಗುಣಗಳು, ಸಮಯ ನಿರ್ವಹಣೆ ಹಾಗೂ ಆತ್ಮವಿಶ್ವಾಸವನ್ನು ಬೆಳಸಿಕೊಳ್ಳಬೇಕೆಂದು  ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ  ಸಮರ್ಥ್ ಶೆಣೈ ಅವರು ತಿಳಿಸಿದರು.
 
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ  ಕಾಲೇಜಿನಲ್ಲಿ ನಡೆದ  ವ್ಯಕ್ತಿತ್ವ ವಿಕಸನ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. 
 
ವಿದ್ಯಾರ್ಥಿಗಳು ಬಂದಂತಹ  ಅವಕಾಶಗಳನ್ನು ಬಳಸಿಕೊಂಡು  ಅಧ್ಯಯನ ನಡೆಸಿದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ.ಡಿ.ಮಂಚಿ ಎಂದರು. 
ವೇದಿಕೆಯಲ್ಲಿ ಐ.ಕ್ಯು.ಎ.ಸಿ. ಸಂಯೋಜಕರಾದ ಡಾ.ಕಾಶೀನಾಥ ಶಾಸ್ತ್ರಿ ಹೆಚ್.ವಿ. ಉಪಸ್ಥಿತರಿದ್ದರು. 
 
ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ  ಅಖಿಲಾ ಪೈ ಸ್ವಾಗತಿಸಿ, ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಶಿವಣ್ಣ ಪ್ರಭು ವಂದಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ  ಸಂವಾದ ಕಾರ್ಯಕ್ರಮ ನಡೆಸಲಾಯಿತು. 
 

By Suddi9

Leave a Reply

Your email address will not be published. Required fields are marked *