ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ೧೪ ಮತ್ತು ೧೭ ರ ವಯೋಮಾನದ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್-೨೦೨೬ ಪಂದ್ಯಾಟವು ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪ್ಪ ಎಲ್ ಬಿ.ಅವರು ಉದ್ಘಾಟಿಸಿ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಕ್ರೀಡೆಯು ಪ್ರಮುಖ ಪಾತ್ರವಹಿಸುತ್ತದೆ. ಕಲಿಕೆಯ ಜೊತೆಗೆ ಕ್ರೀಡೆಯು ಅತೀ ಮುಖ್ಯ ಎಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ,ಗ್ರೇಡ್ -೧ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ ಕೆ., ಶಿಕ್ಷಣ ಸಂಯೋಜಕರಾದ ರಮಾನಂದ,ಪೊಳಲಿ
ಸರಕಾರಿ ಪ್ರೌಢಶಾಲೆಯ ನೋಡಲ್ ಶಿಕ್ಷಕರಾದ ಜಯಂತ್ , ಎಸ್. ವಿ.ಎಸ್ ದೇವಳ ಶಾಲೆಯ ನೋಡಲ್ ಶಿಕ್ಷಕರಾದ ಚಂದ್ರಹಾಸ ಶೆಟ್ಟಿ,ಶಾಲಾ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಚೈತ್ರ ಶೆಟ್ಟಿ, ಪೂರ್ವಪ್ರಾಥಮಿಕ ವಿಭಾಗದ ಸಂಯೋಕಿಯಾದ ವೀಣಾ ದೇವಾಡಿಗ ಉಪಸ್ಥಿತರಿದ್ದರು.
ಸುಮಾರು ೧೨ ತಂಡಗಳು ಮೂರು ವಿಭಾಗದಲ್ಲಿ ಭಾಗವಹಿಸಿತ್ತು.ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿಬಂಟ್ವಾಳ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ದ್ವಿತೀಯ ಬಹುಮಾನ ಪಡೆದುಕೊಂಡಿತು.
ಪ್ರಾಥಮಿಕ ಬಾಲಕರ ವಿಭಾಗದಲ್ಲಿಯು ಬಂಟ್ವಾಳ ಎಸ್.ವಿ.ಎಸ್ ದೇವಳಆಂಗ್ಲ ಮಾಧ್ಯಮ ಶಾಲೆ ಪ್ರಥಮ ಹಾಗೂ ಎಸ್.ವಿ.ಎಸ್ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ದ್ವಿತೀಯ ಬಹುಮಾನ ಪಡೆಯಿತು.
ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ಮೊಡಂಕಾಪು ಕಾರ್ಮೆಲ್ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ದತವಿತೀಯ ಸ್ಥಾನ ಪಡೆದುಕೊಂಡರು.
ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ
ಬಂಟ್ವಾಳ ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಹಾಗೂ ಅಳಿಕೆ ಶ್ರೀ ಸತ್ಯ ಸಾಯಿ ಸೇವಾ ಕೇಂದ್ರದ ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಪಡೆಯಿತು.
ವಿಜೇತ ಮಕ್ಕಳಿಗೆ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಯನ್ನು ವಿತರಿಸಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರು ರಾಜೇಶ್ಕುಮಾರ್ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರತೀಕ್ಷಾಕುಮಾರಿ ವಂದಿಸಿದರು , ಸಹ ಶಿಕ್ಷಕಿ ಶ್ವೇತಾ ನಿರೂಪಿಸಿದರು.
