ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಂಗವಾಗಿ ತಾಲೂಕು ಮಟ್ಟದ ಜಾನಪದ ವೈಭವ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಚೆನ್ನೆಮನೆ ಸ್ಪರ್ಧೆ ಆ. 16ರಂದು ಬಿ.ಸಿ.ರೋಡ್‌ನ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ.

ಬೆಳಗ್ಗೆ 10 ಗಂಟೆಯಿಂದ ಜಾನಪದ ವೈಭವ ಸಾಂಸ್ಕೃತಿಕ ಸ್ಪರ್ಧೆ ಆರಂಭವಾಗಲಿದ್ದು, ಬಂಟ್ವಾಳ ತಾಲೂಕಿನ ಆಯ್ದ 10 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ಇದೇ ಸಂದರ್ಭದಲ್ಲಿ ಚೆನ್ನೆಮನೆ ಸ್ಪರ್ಧೆಯೂ ನಡೆಯಲಿದ್ದು, ಈಗಾಗಲೇ 100ಕ್ಕೂ ಅಧಿಕ ಸ್ಪರ್ಧಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಆಟಿಡೊಂಜಿ ಕೂಟ’ದ ಮೂಲಕ ತುಳುನಾಡಿನ ಸಾಂಸ್ಕೃತಿಕ ಪರಂಪರೆ, ಜಾನಪದ ಕಲೆ ಹಾಗೂ ಸಾಂಪ್ರದಾಯಿಕ ಆಟಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಕಾರ್ಯದರ್ಶಿ ಗೀತಾ ಜಗದೀಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 
 

By Suddi9

Leave a Reply

Your email address will not be published. Required fields are marked *