ಬಂಟ್ವಾಳ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆ.12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಲಯದಲ್ಲಿ ಶುಕ್ರವಾರ ನಡೆಯಿತು.
 
 ಬಂಟ್ಚಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಇದರ ಆಶ್ರಯದಲ್ಲಿ ನಡೆಯುವ ಲೋಕ ಅದಾಲತ್ತಿನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಆಸ್ತಿ ವಿವಾದಗಳು, ವಿಭಾಗ ಮೊಕದ್ದಮೆಗಳು, ಹಣ ವಸೂಲಿ ಪ್ರಕರಣಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿಯಲ್ಲಿ ದಾಖಲಾದ ಮೊಕದ್ದಮೆಗಳು, ಮೋಟಾರು ವಾಹನ ಪ್ರಕರಣಗಳು, ವಿವಾಹ ಸಮನ್ವಯ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಮತ್ತು ಇತರ ರಾಜಿಗೆ ಯೋಗ್ಯ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಸಿವಿಲ್ ಮತ್ತು ಕ್ರಿಮಿನಲ್ ವಿವಾದ ಪರಿಹರಿಸಿಕೊಳ್ಳಲು ಪ್ರಯತ್ನ ಮಾಡಬಹುದಾಗಿದೆ ಎಂದು ಸಮಿತಿಯ ಅಧ್ಯಕ್ಷ ಅನಿಲ್ ಪ್ರಕಾಶ್‌ ಎಂ. ಪಿ.ಅವರು ತಿಳಿಸಿದ್ದಾರೆ
 
ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾಜೇಂದ್ರ ಪ್ರಸಾದ್ ಕೆ.ಎಸ್., ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಕುಮಾರಿ ಸೌಂದರ್ಯ ಎಂ. ಹಾಗೂ ವಿವಿಧ ಇಲಾಖಾಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಹಾಜರಿದ್ದರು

By Suddi9

Leave a Reply

Your email address will not be published. Required fields are marked *