ಬಂಟ್ವಾಳ: ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರ ಸ್ಮರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ಅವರ ತ್ಯಾಗ ಮತ್ತು ಆದರ್ಶಗಳನ್ನು ಸದಾ ನೆನಪಿನಲ್ಲಿಟ್ಟುಕೊಂಡು ದೇಶದ ಏಳಿಗೆಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. 

ಬಿಜೆಪಿ ಬಂಟ್ವಾಳ ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಂದೇ ಮಾತರಂ’ ಘೋಷಣೆಯ 150ನೇ ವರ್ಷದ ಹಿನ್ನೆಲೆಯಲ್ಲಿ ದೇಶಭಕ್ತಿ, ರಾಷ್ಟ್ರಾಭಿಮಾನ ಮತ್ತು ಸ್ವಾತಂತ್ರ್ಯ ಹೋರಾಟದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಹೇಳಿದರು.


ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುಲೋಚನ ಜಿ.ಕೆ. ಭಟ್ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ ಬಜ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಕ್ಷೇತ್ರದ ಉಪಾಧ್ಯಕ್ಷ ವಸಂತ ಅಣ್ಣಳಿಕೆ, ಕಾರ್ಯದರ್ಶಿ ಹರೀಶ್ ಪಡು, ಕಾರ್ಯಾಲಯ ಕಾರ್ಯದರ್ಶಿ ಪ್ರಣಾಮ್ ರಾಜ್ ಅಜ್ಜಿಬೆಟ್ಟು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಶ್ರೀ ಕಲ್ಲಡ್ಕ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುರೇಶ್ ಕೋಟ್ಯಾನ್, ಪ್ರಮುಖರಾದ ರಾಮ್ ದಾಸ್ ಬಂಟ್ವಾಳ, ಕರುಣೇಂದ್ರ ಪೂಜಾರಿ, ಸುರೇಶ್ ಟೈಲರ್, ಜಯರಾಮ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *