ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರ ದೂರದೃಷ್ಟಿಯ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರೂಪಿಸಲ್ಪಟ್ಟ ಕಾರ್ಯಕ್ರಮದಿಂದಾಗಿ ಕರಾವಳಿ ಭಾಗದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತಾಗಿದೆ ಎಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ರವಿವಾರ ಪರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಸಭಾಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ ) ಬಂಟ್ವಾಳ ಇದರ ತುಂಬೆ ವಲಯದ ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಪರಂಗಿಪೇಟೆ,ಸುಜೀರ್, ತುಂಬೆ, ಕಳ್ಳಿಗೆ,ಒಕ್ಕೂಟಗಳ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧನಾ ಸಮಾವೇಶ ಸಮಾರಂಭವನ್ನು ಉದ್ಘಾಟಿಸಿ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಅವರು ಮಾತನಾಡಿದರು.

ಮಹಿಳೆಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಅವರ ಆರೋಗ್ಯದತ್ತ ಹೆಚ್ಚು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದ ಸಚಿವರು ತಾವು ಖರೀದಿಸುವ ಆಹಾರ ಪದಾರ್ಥಗಳ ಮೇಲು ಹೆಚ್ಚು ನಿಗಾ ಇರಿಸಬೇಕು,ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಆಹಾರ ತಯಾರಿಸುವ ಕೇಂದ್ರಗಳ ಮೇಲೆ ನಿಗಾ ವಹಿಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಕಾರ ಪಡೆದು ವಿಶೇಷ ಸಾಧನೆ ಮಾಡಿದ ಸಂಘ ಹಾಗೂ ಸಾಧಕರನ್ನು ಅಭಿನಂದಿಸಲಾಯಿತು.ಸಚಿವ ಯು.ಟಿ.ಖಾದರ್ ಅವರನ್ನು ಸನ್ಮಾನಿಸಲಾಯಿತು.
ಅರ್ಕುಳಬೀಡು ಶ್ರೀ ಉಳ್ಳಾಕು ಮಗೃಂತ್ತಾಯ ಕ್ಷೇತ್ರದ ಧರ್ಮದರ್ಶಿವಜ್ರನಾಭ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ., ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜಾ,ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ನ್ಯಾಯವಾದಿ ಸಹನಾ ಕುಂದರ್ ಸೂಡ ಉಡುಪಿ, ಉದ್ಯಮಿ ಐತಪ್ಪ ಆಳ್ವ ಸುಜೀರುಗುತ್ತು, ಸಂಸ್ಕಾರ ಭಾರತಿಯ ಉಪಾಧ್ಯಕ್ಷ ಅನಿಲ್ ಪಂಡಿತ್ ಬ್ರಹ್ಮರಕೂಟ್ಲು, ಬಂಟ್ವಾಳ ತಾ. ಪಂ. ಮಾಜಿ ಸದಸ್ಯ ಗಣೇಶ್ ಸುವರ್ಣತುಂಬೆ ,ಅರ್ಕುಳ ಶ್ರೀ ರಾಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ದೇವದಾಸ್,ಜನಜಾಗೃತಿ ವೇದಿಕೆ ಸದಸ್ಯರಾದಸದಾನಂದ ಆಳ್ವ ಕಂಪ, ಭಾಸ್ಕರ ಚೌಟ, ತಾರಾನಾಥ ಕೊಟ್ಟಾರಿ, ಸಮೀರಾ ಮೆಲ್ಕಾರ್, ಸುಕೇಶ್ ತೇವು,ಜಯಂತ್ ಕಳ್ಳಿಗೆ, ಸಂತೋಷ್ ಸುಜೀರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ ಪ್ರಸ್ತಾವನೆಗೈದು ಸ್ವಾಗತಿಸಿದರು, ಪರಂಗಿಪೇಟೆ ಒಕ್ಕೂಟ ಸೇವಾ ಪ್ರತಿನಿಧಿ ಅಮಿತಾ ಸಾಧನ ವರದಿ ವಾಚಿಸಿದರು.
ತುಂಬೆ ವಲಯ ಮೇಲ್ವಿಚಾರಕಿ ಮಮತಾ ಗೋಪಾಲಕೃಷ್ಣ ವಂದಿಸಿದರು. ಒಕ್ಕೂಟ ಸೇವಾ ಪ್ರತಿನಿಧಿಗಳಾದ ಅಮಿತಾ, ಮಲ್ಲಿಕಾ,ಅನಿತಾ,ತುಳಸಿ, ಕುಸುಮಾವತಿ, ಪ್ರತಿಭಾ, ವನಿತಾ, ಸಹಕರಿಸಿದರು. ಜಗದೀಶ ಕಡೆಗೋಳಿ ಕಾರ್ಯಕ್ರಮ ನಿರೂಪಿಸಿದರು.
ನಾಲ್ಕು ಒಕ್ಕೂಟಗಳ ನೂತನ ಅಧ್ಯಕ್ಷರು, ಪದಾಧಿಕಾರಿಗಳು ನಿಕಟಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಒಕ್ಕೂಟಗಳ ಸ್ವಸಹಾಯ ಸಂಘಗಳ ಸದಸ್ಯರುಗಳು ಹಾಜರಿದ್ದರು.
