ಬಂಟ್ವಾಳ: ಭಾರತವು ಬಲಿಷ್ಠವಾಗಬೇಕಾದರೆ ಪರಸ್ಪರ ಸೌಹಾರ್ದ ಹಾಗೂ ಸಹಕಾರ ಮನೋಭಾವ ಎಲ್ಲರಲ್ಲೂ ಮೂಡಬೇಕು ಎಂದು ಪ್ರೊ.ಎಂ.ಡಿ.ಮಂಚಿ ಹೇಳಿದರು.

ಬಂಟ್ವಾಳ ವೆಂಕಟರಮಣಸ್ವಾಮೀ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಭಾರತದ ಮಾಜಿ ಪ್ರಧಾನಮಂತ್ರಿಗಳಾದ ದಿ. ರಾಜೀವ್‌ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಿದ್ದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶಿವಣ್ಣಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ನಿರೂಪಿಸಿ, ಸದ್ಭಾವನಾ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.
