ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತವು 2025-26ನೇ ಸಾಲಿನಲ್ಲಿ 1,435.15 ಕೋ.ರೂ. ವ್ಯವಹಾರ ನಡೆಸಿ 5,00,01,702.53 ಕೋ.ರೂ.ನಿವ್ವಳ ಲಾಭ ಗಳಿಸಿದೆ ಎಂದುಸಂಘದ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದ್ದಾರೆ.

ಭಾನುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸದಸ್ಯರಿಗೆ ಶೇ.15 ಡಿವಿಡೆಂಟ್ ಘೋಷಿಸಿದರು.
ಪ್ರಸಕ್ತ ಸಾಲಿನಲ್ಲಿ 264,07,77,078.16 ರೂ. ಠೇವಣಿ ಸಂಗ್ರಹವಾಗಿದ್ದು, ಇತರ ಬ್ಯಾಂಕ್ಗಳಲ್ಲಿ 57,84,38,764.20 ಧನ ವಿನಿಯೋಗ ಮಾಡಲಾಗಿದೆ. ಸದಸ್ಯರಿಗೆ ಒಟ್ಟು 248,99,81,859.74 ರೂ.ಸಾಲ ವಿತರಿಸಲಾಗಿದೆ ಎಂದು ತಿಳಿಸಿದ ಅವರು ವರ್ಗೀಕರಣದಲ್ಲು ‘ಎ’ ತರಗತಿಯ ಪಡೆದಿದೆ ಎಂದು ತಿಳಿಸಿದರು.
ಸದಸ್ಯರು ಸಂಘದೊಂದಿಗೆ ನಿರಂತರವಾಗಿ ವ್ಯವಹರಿಸುವ ಮೂಲಕ ಸಂಸ್ಥೆಯ ಬೆಳವಣಿಗೆಗೆ ಬೆಂಬಲಿಸಿದ್ದಾರೆ.ಆಡಳಿತ ಮಂಡಳಿಯ ನಿರ್ದೇಶಕರ ಮಾರ್ಗದರ್ಶನ, ಸಿಬ್ಬಂದಿಯ ಪ್ರಾಮಾಣಿಕ ಹಾಗೂ ಸಮರ್ಪಣಾ ಮನೋಭಾವದ ಸೇವೆ ಮತ್ತು ಸದಸ್ಯರ ಸಹಕಾರದಿಂದ ಸಂಘವು ಪ್ರಗತಿ ಪಥದಲ್ಲಿ ಮುನ್ನಢಯಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಸಂಘದ ವ್ಯವಹಾರವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಸದಸ್ಯರಿಗೆ ಅಗತ್ಯವಿರುವ ವಿವಿಧ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವ ಉದ್ದೇಶ ಹೊಂದಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗೆ ಅನುಗುಣವಾಗಿ ತಂತ್ರಜ್ಞಾನ ಆಧಾರಿತ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಂಘದ ಮೇಲೆ ಸದಸ್ಯರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಪಾರದರ್ಶಕ ಹಾಗೂ ಸದಸ್ಯ ಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗುವುದು ಎಂದು ಅಧ್ಯಕ್ಷ ಸುರೇಶ್ ಕುಲಾಲ್ ಹೇಳಿದರು.
ಸಂಘದ ಪ್ರಧಾನ ವ್ಯವಸ್ಥಾಪಕ ಮೋಹನ್ ಎಂ.ಕೆ. ಅವರು ವಾರ್ಷಿಕ ವರದಿ,ಲೆಕ್ಕಪತ್ರ ಮಂಡಿಸಿದರು.
ಉಪಾಧ್ಯಕ್ಷ ಜನಾರ್ದನ ಬೊಂಡಾಲ, ನಿರ್ದೇಶಕರಾದ ರಮೇಶ್ ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಬಿ.ರನೇಶ್ ಸಾಲ್ಯಾನ್ ,ಅರುಣ್ ಕುಮಾರ್ ಕೆ., ಭೋಜ ಸಾಲಿಯಾನ್, ಪ್ರೇಮನಾಥ ಬಂಟ್ವಾಳ, ಹರೀಶ್, ವಿದ್ಯಾ, ಮಾಲತಿ ಮಚ್ಚೇಂದ್ರ, ಜಗನ್ನಿವಾಸ ಗೌಡ, ಎಂ.ಕೆ. ಗಣೇಶ್ ಸಮಗಾರ, ರೇಖಾ ನಾಯಕ್ ಹಾಗೂ ನಿವೃತ್ತ ವ್ಯವಸ್ಥಾಪಕ ಭೋಜ ಮೂಲ್ಯ ಉಪಸ್ಥಿತರಿದ್ದರು. ನಿರ್ದೇಶಕ ಸತೀಶ್ ಸ್ವಾಗತಿಸಿದರು. ಕಿರಣ್ ಕುಮಾರ್ ವಂದಿಸಿದರು.
