ಬಂಟ್ವಾಳ: ಸ್ವಚ್ಛತಾ ಪಖ್ವಾಡಾ 2026ರ ಅಂಗವಾಗಿ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ವಾಮದಪದವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ವಚ್ಛತೆಯು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಆಲ್ಬರ್ಟ್ ಡಿಸೋಜಾ, ಉಪಾಧ್ಯಕ್ಷರಾದ ದಿನೇಶ್ ದಂಬೇದರ್ ಹಾಗೂ ಜನೌಷಧಿಯ ಮಾರ್ಕೆಟಿಂಗ್ ಅಧಿಕಾರಿ ಶಿವಕುಮಾರ್ ಉಪಸ್ಥಿತರಿದ್ದರು.
ವಾಮದಪದವು ಜನೌಷಧಿ ಕೇಂದ್ರದ ಮಾಲಕರಾದ ಮನೋಜ್ ಕುಲಾಲ್ ಅವರು ನಿರೂಪಿಸಿದರು
