ಬಂಟ್ವಾಳ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಏಮಾಜೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು.

ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಪೂಜಾರಿ ಕೊಡಾಜೆ, ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ರಾಜೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ಮೋಹನ್ ಮುಜಾಲ, ಸುಜೀತ್ ಬಾಕಿಲ, ಸದಸ್ಯರಾದ ನಿಶಾಂತ್, ವಸಂತಿಕೃಷ್ಣಪ್ಪ ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿ ಸುಚಿತ್ ಅಂಚನ್ ಅವರು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸುವ ನಿಟ್ಟಿನಲ್ಲಿ ಸಹಕರಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಡಾ. ತ್ರಿವೇಣಿ ರಮೇಶ್ ಉಪಸ್ಥಿತರಿದ್ದರು
