ಬಂಟ್ವಾಳ:ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು, ಬೆಳ್ತಂಗಡಿ ತಾಲೂಕು ವೇಣೂರು ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಶಿಕ್ಷಕರಾಗಿರುವ ಕೆ. ರವೀಂದ್ರ ನಾಯಕ್ ಕರ್ಪೆ ಇವರಿಗೆ ಈ ವರ್ಷದ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬಾಜನರಾದ ಹಿನ್ನೆಲೆಯಲ್ಲಿಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ವತಿಯಿಂದ ಅಭಿನಂದಿಸಿ ಗೌರವಾರ್ಪಣೆ ಸಲ್ಲಿಸಲಾಯಿತು.

ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿ ,ಶಿಕ್ಷಕರು ಮಕ್ಕಳಿಗೆ ಶಿಕ್ಷಣವನ್ನು ಭೋದಿಸುವುದರ ಜೊತೆಗೆ ಅವರಲ್ಲಿರುವ ನ್ಯೂನತೆಗಳನ್ನು  ತಿದ್ದಿ ವಿದ್ಯಾರ್ಥಿಗಳ ಏಳಿಗೆಯಲ್ಲಿ ಖುಷಿ ಪಡುತ್ತಿರುವ ಶಿಕ್ಷಕರ ವೃತ್ತಿ ಇತರ ವೃತ್ತಿಗಳಿಗಿಂತ ಶ್ರೇಷ್ಠವಾದುದು ಎಂದರು.


ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಶುಭ ಹಾರೈಸಿದರು.
ಗೌರವ ಸ್ವೀಕರಿಸಿ ಮಾತನಾಡಿದ ಶಿಕ್ಷಕ ಕೆ. ರವೀಂದ್ರ ನಾಯಕ್ ನನಗೆ ಜಿಲ್ಲಾ ಅತ್ಯುತ್ತಮ ಪ್ರಶಸ್ತಿ ಲಭಿಸಿರುವ ಹಿಂದೆ ನನ್ನ ಶಾಲಾ ಸಹೋದ್ಯೋಗಿಗಳ ಪಾತ್ರ, ಪೋಷಕರ ಸಹಕಾರ, ಹಳೆ ವಿದ್ಯಾರ್ಥಿಗಳ ಪರಿಶ್ರಮ ಅಡಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತಾ ಸಹಕಾರ ಸಂಘದ ಸದಸ್ಯನಾಗಿರುವ ನೆಲೆಯಲ್ಲಿ ನನ್ನನ್ನು ಗೌರವಿಸಿದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸಮಾಜ ಮುಖಿ ಸೇವೆಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಮಾದರಿಯಾಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಸಂಘದ  ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ , ದಿನೇಶ್ ಪೂಜಾರಿ ,ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ , ವೀರಪ್ಪ ಪರವ , ವಿಶ್ವನಾಥ ಶೆಟ್ಟಿಗಾರ್ , ಎ ಶಿವ ಗೌಡ ,  ಕೀರ್ತಿರಾಜ್ (ಎಸ್. ಸಿ. ಡಿ. ಸಿ. ಸಿ. ಬ್ಯಾಂಕ್ ಪ್ರತಿನಿಧಿ )ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ,ಮಂದಾರತಿ ಎಸ್ ಶೆಟ್ಟಿ , ಪುಷ್ಪಲತಾ ಎಸ್ ಆರ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಸಿಬ್ಬಂದಿಗಳಾದ ಹೇಮಂತ್ ಸಿದ್ದಕಟ್ಟೆ, ಪ್ರದೀಪ್ ಆರಂಬೊಡಿ ಉಪಸ್ಥಿತರಿದ್ದರು . ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ ,ಧನ್ಯವಾದವಿತ್ತರು .

By Suddi9

Leave a Reply

Your email address will not be published. Required fields are marked *