ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಬಂಟ್ಚಾಳ ಮಂಡಲದ ವತಿಯಿಂದ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಗುರುವಾರ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳು ನಡೆಸಲಾಯಿತು.
ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 47ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.. 

ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಜನರ ಸೇವೆ ಮಾಡಲು ಮತ್ತಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ದೇಶದ ಅಭಿವೃದ್ಧಿ, ಉತ್ತಮ ಆಡಳಿತ ಹಾಗೂ ಜನಕಲ್ಯಾಣ ಕಾರ್ಯಗಳು ನಿರಂತರವಾಗಿ ನಡೆಯುವಂತಾಗಲಿ ಎಂಬ ಆಶಯದೊಂದಿಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.


ಪ್ರಧಾನಿಗೆ ದೇವರ ಆಶೀರ್ವಾದ ಸದಾ ಇರಲಿ’:-
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್,  ಅವರು ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ದೇಶದ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ಹಲವು ಮಹತ್ವದ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರಿಗೆ ದೇವರ ಆಶೀರ್ವಾದ ಸದಾ ಇರಲಿ. ಉತ್ತಮ ಆರೋಗ್ಯ ಮತ್ತು ಶಕ್ತಿ ದೊರೆಯಲಿ. ದೇಶವನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯುವ ಕಾರ್ಯದಲ್ಲಿ ಮುಂದೆಯೂ ಯಶಸ್ಸು ದೊರೆಯಲಿ ಎಂದು ಹಾರೈಸಿದರು.


ರಾಜ್ಯ ಬಿಜೆಪಿ ಪ್ರಮುಖರಾದ ವಿಕಾಸ್ ಪುತ್ತೂರು,  ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ ಬಜ, ಪುರಸಭೆಯ ಮಾಜಿ ಸದಸ್ಯರಾದ ಗೋಪಾಲ ಸುವರ್ಣ, ದಿನೇಶ್ ಭಂಡಾರಿ,ಜನಾರ್ದನ ಬೊಂಡಾಲ,ಹರಿಪ್ರಸಾಧ್, ಪಕ್ಷದ ಪ್ರಮುಖರಾದಮೋಹನ್ ಪಿ‌ಎಸ್. ,ಸಂತೋಷ್  ನರಿಕೊಂಬು,  ಭಾಸ್ಕರ ಟೈಲರ್, ಸದಾನಂದ ನಾವೂರ,ಕಾರ್ತಿಕ್ ಬಲ್ಲಾಳ್, ಸುರೇಶ್ ಕೋಟ್ಯಾನ್, ಲೋಕನಾಥ ಶೆಟ್ಟಿ, ಪ್ರಣಾಮ್ ರಾಜ್,ಲಕ್ಣಣ್ ರಾಜ್ ಪಾಣೆಮಂಗಳೂರು ,ರಜನಿ ಚಿಕ್ಕ್ಯಯಮಠ ಹಾಗೂ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ ಕೊಳತ್ತಮಜಲು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

By Suddi9

Leave a Reply

Your email address will not be published. Required fields are marked *