ಬಂಟ್ವಾಳ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೀನಪ್ಪ ಪೂಜಾರಿ ಬರಿಮಾರು ನಿವಾಸದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರಾದದಿನಕರ ಅಂಚನ್ ಬರಿಮಾರು ಅವರು ಮಾತನಾಡಿ, “ಮಾನವಕುಲಕ್ಕೆ ಸಮಾನತೆಯ ಸಂದೇಶ ನೀಡಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತಿ, ಮತ, ಭೇದಭಾವಗಳನ್ನು ಮೀರಿ ಮಾನವೀಯತೆಯ ಬದುಕಿಗೆ ದಾರಿ ತೋರಿಸಿದವರಯ ಎಂದರು.

ಶಿಕ್ಷಣದ ಮೂಲಕ ಜ್ಞಾನವನ್ನು ಬೆಳೆಸಬೇಕು, ಸಂಘಟನೆಯ ಮೂಲಕ ಸಮಾಜವನ್ನು ಬಲಪಡಿಸಬೇಕು ಹಾಗೂ ಸಮಾನತೆಯ ಮೂಲಕ ಎಲ್ಲರನ್ನೂ ಒಂದಾಗಿ ಕಾಣಬೇಕು ಎಂಬುದು ಗುರುಗಳ ತತ್ವದ ಸಾರವಾಗಿದೆ. ಅವರ ಸಂದೇಶಗಳು ಇಂದಿಗೂ ಸಮಾಜದ ಪ್ರಗತಿಗೆ ಮಾರ್ಗದರ್ಶಕವಾಗಿವೆ. ಗುರುತತ್ವವನ್ನು ಮನೆ ಮನೆಗೆ ತಲುಪಿಸುವ ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಸಂಘಟನಾ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜನಾರ್ದನ, ಲೋಕೇಶ್, ಬಾಲಕೃಷ್ಣ, ಯಶೋಧರ, ಸುಜಿತ್ ಬಾಕಿಲ ಹಾಗೂ ಸಚಿನ್ ಪೆರಾಜೆ ಅವರು ಭಜನೆ ಸಂಕೀರ್ತನೆಯಲ್ಲಿ ಭಾಗವಹಿಸಿದರು. ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ರಮೇಶ್ ಪೂಜಾರಿ ಮುಜಲ, ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಯುವವಾಹಿನಿ ಘಟಕದ ನಿರ್ದೇಶಕರು, ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು
ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಸಾರ ನಿರ್ದೇಶಕ ಶ್ರೀಧರ್ ಪೂಜಾರಿ ಮುಜಲ ವಂದಿಸಿದರು. ಡಾ. ತ್ರಿವೇಣಿ ರಮೇಶ್ ನಿರೂಪಣೆಗೈದರು.
