ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರ ಕಚೇರಿ, ದಕ್ಷಿಣ ಕನ್ನಡ ಹಾಗೂ ತುಂಬೆ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ–ಬಾಲಕಿಯರ ಕರಾಟೆ ಸ್ಪರ್ಧೆಯು ತುಂಬೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ್ ಶೆಟ್ಟಿ ಬಿ.ಎ. ಅವರು ಕರಾಟೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ, ಸಮಯಪ್ರಜ್ಞೆ ಹಾಗೂ ಸವಾಲುಗಳನ್ನು ಎದುರಿಸುವ ಮನೋಭಾವವನ್ನು ಬೆಳೆಸುತ್ತದೆ. ಕರಾಟೆಯಂತಹ ಸಮರಕಲೆಗಳು ವಿದ್ಯಾರ್ಥಿಗಳಲ್ಲಿ ಆತ್ಮರಕ್ಷಣೆ, ಏಕಾಗ್ರತೆ ಹಾಗೂ ಮಾನಸಿಕ ದೃಢತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದಿನೇಶ್ ಶೆಟ್ಟಿ ಅಳಿಕೆ ವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ರಾಹುಲ್ ತೋನ್ಸೆ,ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು,ತುಂಬೆ ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ (ರಿ) ಅಧ್ಯಕ್ಷರಾದ ಬಿ. ಅಬ್ದುಲ್ ಸಲಾಂ ಶುಭಹಾರೈಸಿದರು.
ತುಂಬೆ ಪದವಿ ಪೂರ್ವ ಕಾಲೇಜಿನ ಕಛೇರಿ ಅಧೀಕ್ಷಕರು ಅಬ್ದುಲ್ ಕಬೀರ್, ಕಾಲೇಜಿನ ನಿವೃತ್ತ ಪ್ರಾಂಶುಪಾಲ ಗಂಗಾಧರ ಆಳ್ವ, ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ಮೊಹಮ್ಮದ್ ನದೀಮ್, ಬೋಳಿಯಾರ್ ಇಂಡಿಯನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಮೊಹಮ್ಮದ್ ಹನೀಫ್, ರಕ್ಷಕ ಶಿಕ್ಷಕ ಸಂಘದ ಕ್ರೀಡಾ ಕಾರ್ಯದರ್ಶಿ ಅಬ್ದುಲ್ ಗಪೂರ್ ಹಸನ್, ತುಂಬೆ ಪ್ರೌಢಶಾಲೆಯ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಮೋಹಿನಿ ಸುವರ್ಣ, ಸದಸ್ಯರಾದ ಚಂಚಲಾಕ್ಷಿ, ಮ್ಯಾಕ್ಸಿಮ್ ಕುವೆಲ್ಲೊ ಹಾಗೂ ಶರೀಫ್ ವಿಯೆಟ್ನಾಂ, ತುಂಬೆ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ವಿದ್ಯಾ, ಆಂಗ್ಲ ಮಾಧ್ಯಮದ ಮುಖ್ಯೋಪಾಧ್ಯಾಯಿನಿ ಸೌಮ್ಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕಿ ಮೋಲಿ ಎಡ್ನಾ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಂ ಜೆ. ನಾಯಕ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪ್ರೌಢಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ಜಗದೀಶ್ ರೈ ವಂದಿಸಿದರು.
ಉಪನ್ಯಾಸಕಿ ಕವಿತಾ ಎಂ. ಕಾರ್ಯಕ್ರಮ ನಿರೂಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪದವಿ ಪೂರ್ವ
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
