ಬಂಟ್ವಾಳ: ಪರಿಸರವು ದಿನದಿಂದ ದಿನಕ್ಕೆ ಕಲುಷಿತಗೊಳ್ಳುತ್ತಿದ್ದು ಅದನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಹಾಗೂ ಓಝೋನ್ ಪದರವು ಜೀವಿಗಳಿಗೆ ಹಾನಿಕಾರಕವಾದ ಅತಿನೇರಳೆ ಕಿರಣಗಳಿಂದ ರಕ್ಷಿಸುತ್ತಿದೆ ಇದಕ್ಕೆ ಧಕ್ಕೆಬರದಂತೆ ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಓಝೋನ್ ಸಂರಕ್ಷಣೆ ಮಾಡಬೇಕು ಎಂದು ಬಂಟ್ವಾಳ ಅರಣ್ಯ ಇಲಾಖೆಯ ಉಪ ಅರಣ್ಯಸಂರಕ್ಷಣಾಧಿಕಾರಿ ಕೃಷ್ಣ ನಾಯಕ್ ಹೇಳಿದ್ದಾರೆ.

ಬಂಟ್ವಾಳ ಶ್ರೀ ವೆಂಕಟರಮಣಸ್ವಾಮೀ ಕಾಲೇಜು, ಬಂಟ್ವಾಳದ ವಿಜ್ಞಾನ ಸಂಘ, ಐ.ಐ.ಸಿ ಹಾಗೂ ಐ.ಕ್ಯು.ಎ.ಸಿ.ಯ ಸಂಯುಕ್ತಾಶ್ರಯದಲ್ಲಿ ವಿಶ್ವ ಓಝೋನ್ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಕೃತಿಯಲ್ಲಿನ ಸಮತೋಲನವನ್ನು ಕಾಪಾಡಲು ಓಝೋನ್ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಹಿಂದಿನ ಪ್ರಸ್ತುತ ಹವಾಮಾನ ಬದಲಾವಣೆಯಲ್ಲಿ ಇದರ ಸಂರಕ್ಷಣೆ ಮುಖ್ಯವಾಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಎಂ.ಡಿ.ಮAಚಿ ತಿಳಿಸಿದರು.
ವಿಜ್ಞಾನ ಸಂಘದ ಸಂಯೋಜಕರಾದ ಡಾ.ವಿನಾಯಕ ಕೆ.ಎಸ್. ಸ್ವಾಗತಿಸಿ, ಶ್ರೀ ಸುಪ್ರೀತ್ ಕಡಕೋಳ್ ವಂದಿಸಿದರು. ಕು.ತೃಪ್ತಿ ನಿರೂಪಿಸಿದರು. ವಿಶ್ವ ಓಝೋನ್ ದಿನದ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
