ಬಂಟ್ವಾಳ: ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.


ಅಮ್ಮುಂಜೆಯ ಪ್ರಶಾಂತ್ (38), ತೆಂಕಬೆಳ್ಳೂರಿನ ರಾಮದಾಸ್ (43) ಹಾಗೂ ಬಡಗಬೆಳ್ಳೂರಿನ ಶಂಕರ (45) ಬಂಧಿತ ಆರೋಪಿಗಳಾಗಿದ್ದಾರೆ.

ಸೆ.20 ರಂದು ಸಂಜೆ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆಯಲ್ಲಿ ಪ್ರಶಾಂತ್ ಬೆಳ್ಳಾಡ (41) ಎಂಬವರಿಗೆ ಅಟೋರಿಕ್ಷಾದಲ್ಲಿ ಬಂದ   ಆರೋಪಿಗಳು  ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ಗೈದು ಪರಾರಿಯಾಗಿದ್ದರು.


ಹಲ್ಕೆಯಿಂದ ಪ್ರಶಾಂತ್ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು..
ಈ ಕುರಿತು  ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತ ಆರೋಪಿಗಲಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ  ಎಂಬವರನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

By Suddi9

Leave a Reply

Your email address will not be published. Required fields are marked *