ಬಂಟ್ವಾಳ: ಬಿ ಸಿ ರೋಡಿನಲ್ಲಿ ಸೋಮವಾರ ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯವಾದಿ ಪ್ರಸಾದಕುಮಾರ್ ರೈ ಅವರು ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲು ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಪ್ರಕ್ರಿಯೆ ಕುರಿತಂತೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಆರೋಪದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಸಾದ್ ಕುಮಾರ್ ರೈ ವಿರುದ್ಧ ದೂರು ದಾಖಲಿಸಿರುವುದನ್ನು ಮಂಗಳೂರು ಗ್ರಾಮಾಂತರ ಜಿಲ್ಲಾ ಬಜರಂಗದಳ ಜಸಹ ಸಂಯೋಜಕ ಸಂತೋಷ್ ಸರಪಾಡಿ ಅವರು ಖಂಡಿಸಿದ್ದಾರೆ.

ಇದು ಹಿಂದೂ ಕಾರ್ಯಕರ್ತರ ಪರವಾಗಿ ನ್ಯಾಯಾಲಯದಲ್ಲಿ ಕಾನೂನಾತ್ಮಕವಾಗಿ ಹೋರಾಡುವ ವಕೀಲರ ಧ್ವನಿಯನ್ನು ಹತ್ತಿಕ್ಕುವ ವ್ಯವಸ್ಥಿತ ಹುನ್ನಾರವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಕೀಲರಾದ ಪ್ರಸಾದ್ ಕುಮಾರ್ ರೈ ಯವರು ತಮ್ಮ ಪ್ರಸ್ತಾವಿಕ ಭಾಷಣದಲ್ಲಿಪ್ರಕರಣದ ಸತ್ಯಾ ಸತ್ಯತೆಯ ಬಗ್ಗೆ ವಿವರಣೆಯನ್ನು ನೀಡಿದ್ದಾರೆಯೇ ಹೊರತು ನ್ಯಾಯಾಲದಲ್ಲಿ ನಡೆದ ವಾದ-ವಿವಾದದ ವಿಷಯವನ್ನು ಯಾವುದೇ ಅಪಮಾನಕವಾಗಲೀ, ಅವಹೇಳನಕಾರಿಯಾಗಲೀ, ಸಂವಿಧಾನ ವಿರೋಧಿಯಾದ ಯಾವುದೇ ಶಬ್ಧಗಳನ್ನು ಬಳಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹಿಂದೂ ಕಾರ್ಯಕರ್ತರ ಪರವಾಗಿ ಧ್ವನಿ ಎತ್ತುವವರನ್ನು ಹತ್ತಿಕ್ಕುವ ಮೂಲಕ ಓಟು ಬ್ಯಾಂಕ್ ರಾಜಕಾರಣಕ್ಕಾಗಿ ಒಂದು ಸಮುದಾಯದ ಜನರನ್ನು ಓಲೈಸಲು ರಾಜ್ಯ ಸರಕಾರ ಪೋಲಿಸ್ ಇಲಾಖೆಯನ್ನು ದುರುಪಯೋಗ ಪಡಿಸಿಕೊಂಡು ನಿಲ್ಲಿಸಬೇಕು,ಇದನ್ನು ಕಾನೂನಾತ್ಮಕವಾಗಿ ಪ್ರಶ್ನಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
