ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ 2026-27ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟವು  ಮೂಡಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಿತು.

ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ ಅವರು ದೀಪ ಪ್ರಜ್ವಲಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ಸಮಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ಮಾತನಾಡಿ, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಪಠ್ಯದಷ್ಟೇ ಕ್ರೀಡೆಗೂ ಮಹತ್ವವಿದೆ. ಕ್ರೀಡೆಯು ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ ಎಂದು ತಿಳಿಸಿ ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಜೈರಾಬಿ ಎನ್.ಎಸ್. ವಹಿಸಿದ್ದರು. ಮೂಡಬಿದಿರೆ ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾ‌ರ್ ಹೊಳ್ಳ, ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜ್ಯೋತಿ ಕುಮಾರಿ, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮಾನಾಥ ಶೆಟ್ಟಿ, ಬಂಟ್ವಾಳ ತಾಲೂಕು ಕ್ರೀಡಾ ಸಂಯೋಜಕ ನಿತಿನ್ ಕೊಡಿಯಾಲ,ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಕೊಟ್ಟಾರಿ ಹಾಗೂ ನಿತಿನ್ ಅರಸ ಉಪಸ್ಥಿತರಿದ್ದರು.


ಕಾಲೇಜಿನ ಉಪನ್ಯಾಸಕರಾದ ಬಾಲಕೃಷ್ಣ ನಾಯ್ಕ ಬಾಲಕೃಷ್ಣ ಎನ್.ವಿ., ಸುರೇಶ್ ಬಿ., ಸುಂದರಿ, ಶುಭಾ ಕೆ. ಉಪಸ್ಥಿತರಿದ್ದರು. ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು. ಗಾಯತ್ರಿ ಸ್ವಾಗತಿಸಿ, ಭಾರತಿ ವಂದಿಸಿದರು.
ಬಂಟ್ವಾಳ ತಾಲೂಕಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 350 ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಸಾಯಿ ರಾಮ್, ಸುರೇಶ್ ನಂದೋಡಿ ಮತ್ತಿತರರು ಸಹಕರಿಸಿದರು. 

By Suddi9