ಬಂಟ್ವಾಳ: ಕೆಲಿಂಜ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿರುವ ಅವರು ಸೋಮವಾರ ರಾತ್ರಿ ಮನೆಯಲ್ಲಿ ತಿಂಡಿ ಸೇವಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.


ಶಾಲೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸಿದ್ದರು.  ಅವರ ಅಕಾಲಿಕ ನಿಧನ ಶಿಕ್ಷಕ ಹಾಗೂ ಶಿಕ್ಷಕೇತರ ವರ್ಗದಲ್ಲಿ ದು: ಖವನ್ನುಂಟುಮಾಡಿದೆ.ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

By Suddi9