ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಬಂಟ್ವಾಳ ಇವುಗಳ  ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಬೆಂಜನಪದವಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳೊಂದಿಗೆ ವಿವಿಧ ಮನರಂಜನಾ ಹಾಗೂ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.


ಉದ್ಯಮಿ ಬೂಬ ಸಾಲ್ಯಾನ್ ಮೊಗರ್ನಾಡು,ಬೂಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಪತ್ರಕರ್ತ ಸಂತೋಷ್ ಕುಲಾಲ್ ನೆತ್ತರಕೆರೆ, ಪುರುಷೋತ್ತಮ್ ಹಾಲಾಡಿ, ಶಾಲೆಯ ಮುಖ್ಯೋಪಾಧ್ಯಾಯ ಪ್ರಸಾದ್ ಅವರು ಅತಿಥಿಗಳಾಗಿ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ  ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸಾಧನೆ ದಾಖಲಿಸಿರುವ ಪುಟಾಣಿ ಪ್ರಾದ್ಯ ಕುಲಾಲ್ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾರಾಸಂ ಫೌಂಡೇಶನ್ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಅವರನ್ನು ಅಭಿನಂದಿಸಲಾಯಿತು.
ಬಳಿಕ ಮಕ್ಕಳಿಗಾಗಿ ವಿವಿಧ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಮಕ್ಕಳು ಸ್ಪರ್ಧೆಗಳಲ್ಲಿ ಪಾಲ್ಗೊಂಡರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಸುಕುಮಾರ ಬಂಟ್ವಾಳ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿತೇಶ್ ಪಲ್ಲಿಕಂಡ ವಂದಿಸಿ, ಹೆಚ್.ಕೆ. ನಯನಾಡ್ ಕಾರ್ಯಕ್ರಮ ನಿರೂಪಿಸಿದರು. 

By Suddi9