ಬಂಟ್ವಾಳ: ಸಜೀಪಮುನ್ನೂರು ಆಲಾಡಿ ದ.ಕ ಜಿ ಪ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ, ಮಕ್ಕಳ ದಿನಾಚರಣೆಯ ಪ್ರಯುಕ್ತ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಕೊಪ್ಪಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.


ಸಜೀಪಮಾಗಣೆ ತಂತ್ರಿ ಎಂ .ಸುಬ್ರಹ್ಮಣ್ಯ ಭಟ್ ಮಾತನಾಡಿ ಪಂಡಿತ್ ಜವಾಹರಲಾಲ್ ನೆಹರು ಜನ್ಮದಿನವನ್ನು ಅವರ ಇಚ್ಛೆಯಂತೆ ಮಕ್ಕಳ ದಿನಾಚರಣೆಯಾಗಿ ದೇಶದಾದ್ಯಂತ ಆಚರಿಸಲಾಗುತ್ತಿದ್ದು ಚಾಚಾ ನೆಹರು ಪಂಚಶೀಲ ತತ್ವಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಿದ್ದು ನಾವು ಅವರ ಆದರ್ಶವನ್ನು ಮೈಗೂಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ನೀಡಬೇಕೆಂದರು


ಇದೇ ವೇಳೆ ಶೈಕ್ಷಣಿಕ ಹಾಗೂ ಕ್ರೀಡೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ವಿಜೇತರಿಗೆ ಬಹುಮಾನ ವಿತರಿಸಲಾಯಿತಲ್ಲದೆ  ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆಯಿತು.


  ಶಾಲಾಭಿವೃದ್ಧಿ ಸಮಿತಿ ಸದಸ್ಯ ಹಮೀದ್, ಆದಮ್, ಗೀತಾ, ಆಲಾಡಿ ಎಜುಕೇಶನ್ ಟ್ರಸ್ಟ್ ನ ಅಬ್ದುಲ್ ಕರೀಂ, ಯೂಸುಫ್  ಮಂಜಲ್ ಪಾದೆ ಮೊದಲಾದವರು ಉಪಸ್ಥಿತರಿದ್ದರು ಶಾಲಾ ಮುಖ್ಯೋಪಾಧ್ಯಾಯನಿರೋಹಿಣಿ ಸ್ವಾಗತಿಸಿದರು.ಶಿಕ್ಷಕಿ ಸುರೇಖಾ ಶಾಲಾ ಶೈಕ್ಷಣಿಕ ವರದಿಯನ್ನು ವಾಚಿಸಿದರು.ಶಿಕ್ಷಕಿ ಮಾನಸ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು.
ಶಿಕ್ಷಕಿ ಎ ಪದ್ಮಾವತಿ ನಿರೂಪಿಸಿದರು.ವಿದ್ಯಾ ವಂದಿಸಿದರು. 

By Suddi9