ಬಂಟ್ವಾಳ:ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರ ವಿಶೇಷ ಅನುದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಮೂಲಕ ೬೦ ಲಕ್ಷ ರೂ. ವೆಚ್ಚದಲ್ಲಿ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ನಾಡಾಯಿ-ಹಟದಡ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಅವರ ಶಿಫಾರಿಸಿನನ್ವಯ ಮುಖ್ಯಮಂತ್ರಿಯವರು ಈ ವಿಶೇಷ ಅನುದಾನ ಮಂಜೂರುಗೊಳಿಸಿದ್ದಾರೆ.
ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣೀಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಅವರು ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ,ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ ಜೈನ್, ಕಕ್ಯಪದವು ಗರೊಡಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಪ್ರಮುಖರಾದ ವಿಶ್ವನಾಥ ಸಾಲ್ಯಾನ್ ಬಿತ್ತ,ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲ್ ಗುತ್ತು, ಶಿವಪ್ಪ ಪೂಜಾರಿ ಹಟದಡ್ಕ, ವಾಸುದೇವ ಮಯ್ಯ, ಕೃಷ್ಣ ಮಯ್ಯ, ಅನಂತರಾಮ ಮಯ್ಯ, ಸೂರ್ಯ ಮಯ್ಯ,ವಿಜಯ ಪೂಜಾರಿ ಹಟದಡ್ಕ,ವಸಂತ ಪೂಜಾರಿ ಹಟದಡ್ಕ, ಆನಂದ ಪೂಜಾರಿ ನಾಡಾಯಿ, ಆನಂದ ಪೂಜಾರಿ ಹಟದಡ್ಕ, ದೇಜಪ್ಪ ಹಟದಡ್ಕ, ಹರೀಶ ಹಟದಡ್ಕ ಮತ್ತಿತರರಿದ್ದರು.
