ಬಂಟ್ವಾಳ: ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಕಾರ ವಿಭಾಗಕ್ಕೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ನಿವಾಸಿ ಸುದರ್ಶನ್ ಜೈನ್ ಇವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ .ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ರವರ ಅನುಮೋದನೆಯ ಮೇರೆಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷರಾದ ಧನರಾಜ್ ಎಸ್.ತಾಳಂಪಳ್ಳಿ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

ಕಳೆದ 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸುದರ್ಶನ್ ಜೈನ್ ಅವರು ಬಂಟ್ವಾಳ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷರಾಗಿ,ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಹಾಗೂ ಆರು ವರ್ಷಗಳ ಕಾಲ ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಪ್ರಸ್ತುತ ಮಂಗಳೂರು ಧವಳಕೋ.ಅಪರೇಟಿವ್ ಸೊಸೈಟಿ ಅಧ್ಯಕ್ಷರಾಗಿದ್ದಾರೆ.
