ಬಂಟ್ವಾಳ:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಕಬ್ಬಮ್ ಪಾಕ್೯ ನಲ್ಲಿರುವ ಬಾಲ ಭವನ ಸೊಸೈಟಿ (ರಿ) ವಠಾರದಲ್ಲಿ ಆಯೋಜಿಸಲಾದ “ರಾಜ್ಯ ಮಟ್ಟದ ಕಲಾಶ್ರೀ ಶಿಬಿರ ೨೦೨೬”ರಲ್ಲಿ “ಏಕಪಾತ್ರಾಭಿನಯ”ವನ್ನು ಪ್ರದರ್ಶಿಸಿರುವ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಹಿಮಾನಿ ಕೆ.ಪ್ರಥಮ ಸ್ಥಾನ ಪಡೆದಿದ್ದಾಳೆ.

 ರಾಜ್ಯದ ಮುಖ್ಯಮಂತ್ರಿಯಿಂದ ಹಿಮಾನಿ .ಕೆ ಅವರು” ಕಲಾಶ್ರೀ ಪ್ರಶಸ್ತಿ”ಯನ್ನು ಶೀಘ್ರದಲ್ಲೇ ಪಡೆಯಲಿದ್ದಾರೆ.

 ಶಿಬಿರದ ಸೃಜನಾತ್ಮಕ ಪ್ರದರ್ಶನ ಕಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳ ೯೨ ವಿದ್ಯಾರ್ಥಿಗಳ ಪೈಕಿ  ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಹಿಮಾನಿ ಕೆ. 

ಇವರು “ಏಕಪಾತ್ರಾಭಿನಯ”ವನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದು, ಪ್ರಥಮ ಸ್ಥಾನ ಪಡೆದಿದ್ದಾಳೆ. 

ಈಕೆ ಕಲ್ಲಡ್ಕ ಸಮೀಪದ ದಾಸಕೋಡಿಯ ಕಿಶೋರ್ ಮತ್ತು ದೀಕ್ಷಾ ದಂಪತಿಯ ಪುತ್ರಿಯಾಗಿದ್ದಾರೆ.

ಇವರಿಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಸಮಿತಿ ಅಧ್ಯಕ್ಷರು , ಸಂಚಾಲಕರು, ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕರು – ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

By Suddi9