ಸುದ್ದಿ9 ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಡಂತ್ಯಾರು ಎಂಬಲ್ಲಿ ಬೈಕಿನಲ್ಲಿ ಸಂಚರಿಸುತ್ತಿದ್ದ ಯುವಕನಿಗೆ ಕಿಡಿಗೇಡಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತರು ಪುಂಜಾಲಕಟ್ಟೆ ಪೊಲೀಸ್ ಠಾಣೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಎಂ.ತುಂಗಪ್ಪ ಬಂಗೇರ, ಪ್ರಜಾಪ್ರಭುತ್ವ ವೇದಿಕೆ ಜಿಲ್ಲಾ ಸಂಚಾಲಕ ಮಹೇಶ ಶೆಟ್ಟಿ ತಿಮರೋಡಿ ಮತ್ತಿತರರು ಇದ್ದರು.
ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಡಂತ್ಯಾರು ಎಂಬಲ್ಲಿ ಬೈಕಿನಲ್ಲಿ ಸಂಚರಿಸುತ್ತಿದ್ದ ಅಶೋಕ ನಾವಡ ಎಂಬ ಯುವಕನಿಗೆ ಕಿಡಿಗೇಡಿ ಯುವಕರ ತಂಡವೊಂದು ತಡೆದು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ನೀಡಿದ ದೂರಿಗೆ ಪೊಲೀಸರು ಸ್ಪಂದಿಸಿಲ್ಲ ಎಂದು ಆರೋಪಿಸಿ ವಿವಿಧ ಹಿಂದೂ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಇದೇ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಪ್ರಜಾಪ್ರಭುತ್ವ ವೇದಿಕೆ ಜಿಲ್ಲಾ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿ, ಆರೋಪಿಗಳನ್ನು ಬಂಧಿಸಿ ಮತೀಯ ಸಾಮರಸ್ಯ ಕದಡದಂತೆ ಕಾಪಾಡಬೇಕಿದ್ದ ಪೊಲೀಸರು ಹಲ್ಲೆಗೊಳಗಾದ ಗಾಯಾಳುಗಳಿಂದ ದೂರು ಸ್ವೀಕರಿಸಲೂ ಹಿಂದೇಟು ಹಾಕಿದ್ದಾರೆ ಎಂದು ಆರೋಪಿಸಿದರು. ಸಮಾಜದಲ್ಲಿ ಸಹನಶೀಲ ಮನೋಭಾವದಿಂದ ಹಿಂದೂ ಸಮುದಾಯ ಬದುಕು ನಡೆಸುತ್ತಿದ್ದರೆ, ಇನ್ನೊಂದೆಡೆ ರಾಜಕೀಯ ಪ್ರೇರಿತ ಶಕ್ತಿಗಳು ನೈಜ ಆರೋಪಿಗಳನ್ನು ರಕ್ಷಿಸುವ ಮೂಲಕ ಮತೀಯ ಸಾಮರಸ್ಯ ಕದಡಲು ಶ್ರಮಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.
ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಠ -ಮಂದಿರಗಳ ಮೇಲೆ ಮಸೂದೆ ಮಂಡನೆ ಮೂಲಕ ಹಿಂದೂಗಳನ್ನು ದಮನಿಸುವ ಕಾರ್ಯಕ್ಕೆ ಮುಂದಾಗಿದ್ದು, ಇಂತಹ ನೀತಿಗೆಟ್ಟ ತಾರತಮ್ಯ ನೀತಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದರು.
ಬಜರಂಗದಳ ಪ್ರಾಂತೀಯ ಸಂಚಾಲಕ ಶರಣ್ ಪಂಪ್ವೆಲ್, ಜಿಲ್ಲಾ ಯುವ ಮೋಚರ್ಾ ಅಧ್ಯಕ್ಷ ರಂಜನ್ ಜಿ. ಗೌಡ, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ತಾ.ಪಂ.ಅಧ್ಯಕ್ಷೆ ಜಯಂತಿ ಪಾಲೇದು, ಜಿ.ಪಂ.ಸದಸ್ಯೆ ತುಳಸಿ ಹಾರಬೆ, ತಾಲ್ಲೂಕು ಯುವ ಮೋಚರ್ಾ ಕಾರ್ಯದರ್ಶಿ ಪುನೀತ್ ಕುಮಾರ್, ಧರ್ಮ ಜಾಗರಣ ವೇದಿಕೆ ಸಂಚಾಲಕ ದಿನಕರ ಆದೆಲು, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಬಜರಂಗದಳ ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ ಮತ್ತಿತರರು ಮಾತನಾಡಿದರು.
ಕಾನೂನು ಸಲಹೆಗಾರ ವಸಂತ ಮರಕಡ, ಪ್ರಮುಖರಾದ ಪದ್ಮನಾಭ ಅರ್ಕಜೆ, ರತ್ನಾಕರ ಶೆಟ್ಟಿ , ಪ್ರಮೋದ್ ಕುಮಾರ್, ಜೋಯೆಲ್ ಮೆಂಡೊನ್ಸಾ , ನಾರಾಯಣ ನಾವುಡ, ಅಶೋಕ್ ನಾವುಡ, ವಿಶ್ವನಾಥ ಪೂಜಾರಿ ಮಡಂತ್ಯಾರು ಮತ್ತಿತರರು ಇದ್ದರು.
ಆರಂಭದಲ್ಲಿ ವಿವಿಧ ವಾಹನಗಳಲ್ಲಿ ಮೆರವಣಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು. ನೈಜ ಆರೋಪಿಗಳನ್ನು ಬಂಧಿಸುವುದರ ಜೊತೆಗೆ ಆರೋಪಿಗಳಿಗೆ ರಕ್ಷಣೆ ನೀಡುತ್ತಿರುವ ಇಲ್ಲಿನ ಠಾಣಾಧಿಕಾರಿ ಲತೇಶ್ ಕುಮಾರ್ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳುವಂತೆ ಇನ್ಸ್ಪೆಕ್ಟರ್ ಲಿಂಗಪ್ಪ ಅವರ ಮೂಲಕ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದರು. ಇದೇ ವೇಳೆ ನೈಜ ಆರೋಪಿಗಳನ್ನು ಬಂಧಿಸುವುದಾಗಿ ಇನ್ಸ್ಪೆಕ್ಟರ್ ಲಿಂಗಪ್ಪ ಅವರು ಪ್ರತಿಭಟನಾಕಾರರಿಗೆ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಂಡರು.
ಬಂಟ್ವಾಳ:
ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಠ -ಮಂದಿರಗಳ ಮೇಲೆ ಮಸೂದೆ ಮಂಡನೆ ಮೂಲಕ ಹಿಂದೂಗಳನ್ನು ದಮನಿಸುವ ಕಾರ್ಯಕ್ಕೆ ಮುಂದಾಗಿರುವುದನ್ನು ಬಂಟ್ವಾಳ ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.
ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆ ಜೊತೆಗೆ ಶಿಕ್ಷಣ ಮತ್ತಿತರ ಸಮಾಜಮುಖಿ ಸೇವಾ ಚಟುವಟಿಕೆಯಲ್ಲಿಯೂ ವಿಶೇಷ ಕಾಳಜಿ ವಹಿಸುತ್ತಿರುವ ಮಠ ಮಂದಿರಗಳೊಂದಿಗೆ ಹಿಂದೂ ಸಮಾಜವು ಭಾವನಾತ್ಮಕ ಸಂಬಂಧ ಹೊಂದಿದೆ. ಈ ದೇಶವನ್ನಾಳಿದ ಬ್ರಿಟೀಷರು ಮತ್ತು ನಿಜಾಮರು ಕೂಡಾ ಮಠ ಮಂದಿರಗಳನ್ನು ಕೈವಶ ಮಾಡಿಕೊಳ್ಳುವ ಪ್ರಯತ್ನ ನಡೆಸಿಲ್ಲ. ಆದರೆ ಕೆಲೆವೊಂದು ಸಮುದಾಯವನ್ನು ಓಲೈಸಿ ರಾಜಕೀಯ ಲಾಭಕ್ಕಾಗಿ ಬಹುಸಂಖ್ಯಾತ ಹಿಂದೂ ಸಮಾಜವನ್ನು ಕಡೆಗಣಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮಸ್ತ ಹಿಂದೂಗಳು ಮತ್ತು ಮಠಾಧೀಶರಲ್ಲಿ ಕ್ಷಮೆಯಾಚಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಮಂಗಳೂರು ವಿಭಾಗ ಸಂಚಾಲಕ ರವಿರಾಜ್ ಬಿ.ಸಿ.ರೋಡ್ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

