ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿಶ್ವವಿದ್ಯಾನಿಲಯ ಸ್ಥಾಪಕ ದಿ.ಮದನ್ ಮೋಹನ್ ಮಾಳವೀಯಾ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.  ಈ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕೃತವಾಗಿ ಘೋಷಿಸಿದ್ದಾರೆ.

malaviya

vajpeyi

ಕೇಂದ್ರ ಸರ್ಕಾರ, ಡಿ.25ರಂದು ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತದ ದಿನವನ್ನಾಗಿ ಘೋಷಿಸಿತ್ತು. ಈ ಬೆನ್ನಲ್ಲೇ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾಳೆ ಅಟಲ್ ಬಿಹಾರಿ ವಾಜಪೇಯಿ ಅವರ 90ನೇ ಜನ್ಮದಿನವಾಗಿದೆ. ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಂದು ಉಭಯ ನಾಯಕರಿಗೂ ಭಾರತದ ಅತ್ಯುನ್ನತ ನಾಗರಿಕ ಗೌರವ ನೀಡಲಾಗುತ್ತದೆ. ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.

By suddi9

Leave a Reply

Your email address will not be published. Required fields are marked *