ಬಂಟ್ವಾಳ: ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿ ಬೀದಿ ಎಂಬಲ್ಲಿ ಸುಮಾರು 800ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾರಣಿಕ ಪ್ರಸಿದ್ಧ ಶ್ರೀ ಕೋದಂಡ ರಾಮಚಂದ್ರ ಹನುಮಂತ ಗರುಡ ದೇವಸ್ಥಾನದಲ್ಲಿ ಜ.7ರಂದು ಬೆಳಿಗ್ಗೆ ರೂ 75ಲಕ್ಷ ವೆಚ್ಚದ ಪುನರ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ ನಡೆಯಲಿದೆ.
ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿ ಇವರ ಮಾರ್ಗದರ್ಶನದಲ್ಲಿ ನಡೆಯುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕಟೀಲು ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕ ಡಾ.ಕೆ.ಪ್ರಭಾಕರ ಭಟ್, ಉದ್ಯಮಿ ಬಿ.ರಘುನಾಥ ಸೋಮಯಾಜಿ, ಮುಜರಾಯಿ ಇಲಾಖೆ ಸಹ ಆಯುಕ್ತ ಎಂ.ನಾಗರಾಜ, ಗ್ರಾ.ಪಂ.ಅಧ್ಯಕ್ಷೆ ಸುಮತಿ ಸದಾನಂದ, ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಮಮತಾ ಎಸ್.ಗಟ್ಟಿ, ಪ್ರಗತಿಪರ ಕೃಷಿಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಪುರಸಭಾ ಸದಸ್ಯ ಪಿ.ರಾಮಕೃಷ್ಣ ಆಳ್ವ, ರೋಟರಿ ಕ್ಲಬ್ಬಿನ ಅಧ್ಯಕ್ಷ ಪ್ರಕಾಶ ಕಾರಂತ, ಕಲ್ಲಡ್ಕ ಶ್ರೀರಾಮ ಭಜನಾ ಮಂದಿರ ಕಾರ್ಯಧ್ಯಕ್ಷ ಜಿತೇಂದ್ರ ಎಸ್.ಕೊಟ್ಟಾರಿ, ಪಾಣೆಮಂಗಳೂರು ಜ್ಯೋತಿ ಬೀಡಿ ಉದ್ಯಮಿ ಬಿ.ರಘು ಸಪಲ್ಯ, ಎಂಜಿನಿಯರ್ ಮದ್ರೇಳಿ ಶಂಕರನಾರಾಯಣ ರಾವ್, ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಕ್ಷೇತ್ರ ಅಧ್ಯಕ್ಷ ಪ್ರಕಾಶ ಅಂಚನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುನಿತ ನಾಯಕ್, ಶಂಭೂರು ಬೆಕೆಮ್ ಇನ್ಫ್ರಾ ಪ್ರಾಜೆಕ್ಟ್ ಕಂಪೆನಿ ಮೆಜೇಜರ್ ಶಿವಪುತ್ರ ಎಂ.ಅಂಕಳ್ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಬಂಗೇರ ನಾಟಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
