ಬಂಟ್ವಾಳ : ಪುಂಜಾಲಕಟ್ಟೆ ಇಲ್ಲಿಗೆ ಸಮೀಪದ ಶ್ರೀ ರಾಮನಗರ ಶ್ರೀರಾಮ ಭಜನ ಮಂದಿರದ ಜೀರ್ಣೋದ್ಧಾರ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಪೂರ್ವಭಾವಿ ಸಮಾಲೋಚನಾ ಸಭೆ ಮಂದಿರದ ವಠಾರದಲ್ಲಿ ಜರಗಿತು.

ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ ಅವರು ಮಾತನಾಡಿ ಭಜನ ಮಂದಿರಗಳು ಗ್ರಾಮದ ಅಭಿವೃದ್ಧಿಗೆ ಪೂರಕವಾಗಿದ್ದು ಗ್ರಾಮಸ್ಥರೆಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಈ ವೇಳೆ ಅವರು ಜೀರ್ಣೋದ್ಧಾರ ಕಾರ್ಯಕ್ಕೆ ಪ್ರಥಮ ಸಹಾಯಧನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ರಚಿಸಲಾಯಿತು. ಸ್ವಾಮೀಜಿ ಅವರನ್ನು ಗೌರವಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಹಾಗೂ ಇತರ ಪದಾಕಾರಿಗಳ ಆಯ್ಕೆ ನಡೆಯಿತು.
ಭಜನ ಮಂದಿರದ ಉಪಾಧ್ಯಕ್ಷ ಗಂಗಾಧರ, ಗ್ರಾ.ಪಂ.ಸದಸ್ಯ ಚಂದ್ರಶೇಖರ ಶೆಟ್ಟಿ , ಪ್ರಕಾಶ ರಾವ್ ನಯನಾಡು
ಮತ್ತಿತರರು ಉಪಸ್ಥಿತರಿದ್ದರು.
ಭಜನ ಮಂದಿರದ ಅಧ್ಯಕ್ಷ ಶ್ರೀನಿವಾಸ ಅತ್ತಾಜೆ ಅವರು ಸ್ವಾಗತಿಸಿದರು. ಕಾರ್ಯದರ್ಶೀ ಹೇಮಂತ್ ವಂದಿಸಿದರು.
