benki

ಥಾಣೆ: ಟಿಂಬರ್ ಗೋದಾಮಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಎಂಟು ಮಂದಿ ಸಜೀವ ದಹನವಾಗಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 2 ಗಂಟೆ ಸುಮಾರಿನಲ್ಲಿ ಥಾಣೆಯ ಮನ್ಕೋಲಿಯಲ್ಲಿರುವ ಟಿಂಬರ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಗೋದಾಮಿನಲ್ಲಿ ಮಲಗಿದ್ದ 8 ಮಂದಿ ಬೆಂಕಿಗೆ ಆವುತಿಯಾಗಿದ್ದು, ಮೂವರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವಘಡ ಸುದ್ದಿ ತಿಳಿಯುದ್ದಿದಂತೆ ಸ್ಥಳಗಾಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಗೋದಾಮಿನಲ್ಲಿ ಸಿಲುಕಿದ್ದ ನಾಲ್ವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ನಾಲ್ಕು ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ನಡೆಸಿದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

By suddi9

Leave a Reply

Your email address will not be published. Required fields are marked *