ನವದೆಹಲಿ: ಘರ್ ವಾಪಸಿ ಕಾರ್ಯಕ್ರಮದ ಸೃಷ್ಟಿಕರ್ತ, ಆರೆಸ್ಸೆಸ್ ನಾಯಕ ರಾಜೇಶ್ವರ್ ಸಿಂಗ್’ರನ್ನು ಸದ್ಯದ ಮಟ್ಟಿಗೆ ಚಟುವಟಿಕೆಗಳಿಂದ ದೂರ ಇರುವಂತೆ ಸೂಚಿಸಲಾಗಿದೆ.
ಇತ್ತೀಚೆಗೆ ದೆಹಲಿಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಬಿಜೆಪಿ ವರಿಷ್ಠರ ಸಭೆಯಲ್ಲಿ ಈ ಬೆಳವಣಿಗೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇಂಥ ಬೆಳವಣಿಗೆಗಳಿಂದ ಕೇಂದ್ರ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂದು ಪ್ರಬಲವಾಗಿ ಆಕ್ಷೇಪಿಸಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ 1996ರಿಂದ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಧರ್ಮ ಜಾಗರಣ ವೇದಿಕೆಯ ನೇತೃತ್ವ ವಹಿಸಿದ್ದ ರಾಜೇಶ್ವರ್ ಸಿಂಗ್’ರನ್ನು ಸಂಘದ ಚಟುವಟಿಕೆಗಳಿಂದ ದೂರ ಇಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಂಘದ ಚಟುವಟಿಕೆಗಳಿಂದ ದೂರ ಇಟ್ಟಿರುವ ವಿಚಾರವನ್ನು ಸಿಂಗ್ ಅವರೇ ಖಚಿತ ಪಡಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ನನ್ನ ಮೇಲೆ ಸಾಕಷ್ಟು ಒತ್ತಡ ಇತ್ತು. ಇದರಿಂದ ನನ್ನ ಆರೋಗ್ಯ ಏರುಪೇರಾಗಿದೆ. ಹೀಗಾಗಿ ವಿಶ್ರಾಂತಿ ತೆಗೆದುಕೊಳ್ಳಲು ಬಯಸುತ್ತೇನೆ ಎಂದಿದ್ದಾರೆ. ಘರ್ ವಾಪಸಿ ಕಾರ್ಯಕ್ರಮವನ್ನು ಸಮರ್ಥಿಸಿಕೊಂಡಿರುವ ಸಿಂಗ್ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕ್ಕೂ ಹೆಚ್ಚು ಮುಸ್ಲಿಮರನ್ನು ಹಿಂದೂ ಧರ್ಮಕ್ಕೆ ಮತಾಂತರ ಮಾಡಿದಾಗ ಸಿಂಗ್ ವಿವಾದಕ್ಕೆ ಗುರಿಯಾಗಿದ್ದರು.
