ಬಂಟ್ವಾಳ : ವಿಪರೀತ ಮದ್ಯ ಸೇವಿಸಿದ ವ್ಯಕ್ತಿಯೊಬ್ಬರು ಬಸ್ ತಂಗುದಾಣದಲ್ಲಿ ಮೃತಪಟ್ಟ ಘಟನೆ ಇಡ್ಕಿದು ಗ್ರಾಮದ ಕೋಲ್ಪೆ ಎಂಬಲ್ಲಿ ಗುರುವಾರ ನಡೆದಿದೆ.

ಕೆದಿಲ ಗ್ರಾಮದ ಅಂಗರಾಜ್ ನಿವಾಸಿ ಜನಾರ್ದನ(50) ಎಂಬವರೇ ಮೃತಪಟ್ಟವರು. ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಇವರು. ಗುರುವಾರ ಬೆಳಿಗ್ಗೆ ಇಡ್ಕಿದು ಗ್ರಾಮದ ಕೋಲ್ಪೆ ಎಂಬಲ್ಲಿರುವ ಬಸ್ ತಂಗುದಾಣದಲ್ಲಿ ಮಲಗಿದ್ದರು. ಸಾರ್ವಜನಿಕರು ಗಮನಿಸಿದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ.
