ಸುದ್ದಿ9 ಕಿನ್ನಿಗೋಳಿ; ಪಂಚೇಂದ್ರಿಯಗಳಲ್ಲಿ ಒಂದಾದ ಕಣ್ಣಿನ ಬಗ್ಗೆ ಕಾಳಜಿ ವಹಿಸಿ ನಿಯಮಿತ ಕಣ್ಣು ತಪಾಸಣೆ ಮಾಡಬೇಕು. ಸಂಘ ಸಂಸ್ಥೆಗಳು ಬಡ ವರ್ಗದ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಹೇಳಿದರು.
ಮುಲ್ಕಿ ವಲಯ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್, ಕಿನ್ನಿಗೋಳಿ ರೋಟರ್ಯಾಕ್ಟ್ ಕ್ಲಬ್, ಇನ್ನರ್ ವೀಲ್ ಕ್ಲಬ್, ಆದರ್ಶ ಬಳಗ ಕೊಡೆತ್ತೂರು, ಯುಗಪುರುಷ ಕಿನ್ನಿಗೋಳಿ ಹಾಗೂ ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಜಂಟೀ ಆಶ್ರಯದಲ್ಲಿ ಶುಕ್ರವಾರ ಕಟೀಲು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ನಡೆದ ಉಚಿತ ನೇತ್ರಾ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಣ್ಣಿನ ತಜ್ಞರಾದ ಡಾ|ದಿವಾಕರ, ಡಾ| ಬಿಂದು, ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಚಂದ್ರಪ್ರಭ, ಮುಲ್ಕಿ ವಲಯ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್ ಅಧ್ಯಕ್ಷ ನವೀನ್ ಕಟೀಲ್, ಕಿನ್ನಿಗೋಳಿ ರೋಟರ್ಯಾಕ್ಟ್ ಕ್ಲಬ್ ಮಾಜಿ ಅಧ್ಯಕ್ಷ ಸುಮೀತ್ ಕುಮಾರ್, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಸಿಂತಿಯಾ ಕುಟಿನ್ಹೊ, ಕೊಡೆತ್ತೂರು ಆದರ್ಶ ಬಳಗದ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಮುಲ್ಕಿ ವಲಯ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್ ಕಾರ್ಯದಶರ್ಿ ಕೆ.ಬಿ.ಸುರೇಶ್ ಕಾರ್ಯಕ್ರಮ ನಿರೂಪಿಸಿದರು.
