ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ಅದ್ದೂರಿಯಿಂದ ನಡೆಯಿತು. ಬ್ರಹ್ಮಶ್ರೀ ನಿಲೇಶ್ವರ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆದವು.


ಬಾನುವಾರ ಬೆಳಿಗ್ಗೆ ಗಣಹೋಮ ನಡೆದು ಬಳಿಕ ದರ್ಶನ ಬಲಿ ಉತ್ಸವ ಆಋಂಭಗೊಂಡು ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸದಾ ನಡೆಯಿತು. ಈ ಸಂದರ್ಭ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಬಲಿ ದರ್ಶನ ಪಡೆದರು. ಹಾಗೂ ಪ್ರಸಾದ ಸ್ವೀಕರಿಸಿದರು. ಬಳಿಕ ನವಕಲಶಾಭಿಷೇಕ, ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
