ಮಂಗಳೂರು: ಕರ್ನಾಟಕ ರಾಜ್ಯದ ಆರೋಗ್ಯ ಸಚಿವರಾಗಿರುವ ಯು.ಟಿ. ಖಾದರ್‌ ಅವರ ಕಾರು ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್‌ ಯಾವುದೇ ಅಪಾಯಗಳುಂಟಾಗಿರುವುದಿಲ್ಲ.

ut1

ut2
ದಕ್ಷಿಣ ಕನ್ನಡ ಜಿಲ್ಲೆಯ ಮಂಜನಬೈಲು ಎಂಬಲ್ಲಿನ ಮೋಂಟೆದಪದವು ಬಳಿ ಆದಿತ್ಯವಾರ ತಡರಾತ್ರಿ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 30 ಅಡಿ ಆಳದ ಹೊಂಡಕ್ಕೆ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿತು ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರು ಚಾಲಕ ಮೋಹನ್‌ ಎಂಬುವವರ ಹಣೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ಅವರು ಬಿಡುಗಡೆಗೊಂಡಿದ್ದಾರೆ.
ಅಪಘಾತವಾಗುವ ಸಂದರ್ಭದಲ್ಲಿ ಕಾರಿನಲ್ಲಿ ಸಚಿವ ಖಾದರ್‌ ಅವರು ಇದ್ದಿರಲಿಲ್ಲ ಆದರೆ ಅವರ ಆಪ್ತಸಹಾಯಕ ಲಿಬ್‌ ಝಿತ್‌ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

By suddi9

Leave a Reply

Your email address will not be published. Required fields are marked *