ಬಂಟ್ವಾಳ : ಜಿ.ಪಂ.ಸದಸ್ಯರ ನಿಧಿಯಿಂದ ಸಜಿಪ ಮುನ್ನೂರು ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 3.00ಲಕ್ಷ ವೆಚ್ಚದ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು . ಜಿ.ಪಂ.ಸದಸ್ಯೆ ಮಮತಾ ಗಟ್ಟಿ , ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ , ರವೀಂದ್ರ ಕಂಬಳಿ , ಎನ್.ಕೆ.ಶಿವ, ನ್ಯಾಯವಾದಿ ದಿನೇಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

