
ಮಂಗಳೂರು: ನಗರದ ಅಂಬೇಡ್ಕರ್ ವೃತ್ತದ ಬಳಿಯಿದ್ದ ಒಣಗಿದ ಪುರಾತನ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು ಚಾಲಕ ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಆಟೋ ಚಾಲಕ ಅಳಪೆ ಕರ್ಮಾರ್ ನ ಗುತ್ತುಗುಡ್ಡೆ ನಿವಾಸಿ ಪದ್ಮನಾಭ ಶೆಟ್ಟಿ(47) ಪ್ರಯಾಣಿಕರನ್ನು ಇಳಿಸಿದ ನಂತರ ಈ ಸ್ಥಳದಲ್ಲಿ ರಿಕ್ಷಾ ಪಾರ್ಕ್ ಮಾಡಿದ್ದರು. ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಗ್ನಿಶಾಮಕದಳದ ಸಿಬ್ಬಂದಿ ಮರವನ್ನು ತೆರವುಗೊಳಿಸುವ ಕಾರ್ಯ ನಡೆಸಿದರು.
