ಮೂಡುಬಿದರೆ: ರಾಜ್ಯ ಇಂಧನ ಸಚಿವ ಡಿ.ಕೆ ಶಿವಕುಮಾರ್ ಸೋಮವಾರ ಮೂಡುಬಿದರೆ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಚಿವ ಅಭಯಚಂದ್ರ ಜೈನ್, ಪುರಸಭಾ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಬಶೀರ್, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಸದಸ್ಯ ಸುರೇಶ್ ಪ್ರಭು, ಅಕ್ರಮ ಸಕ್ರಮ ಸಮಿತಿ ಸದಸ್ಯ ಸುಂದರ ಸಿ. ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೇಘನಾದ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರಹಾಸ್ ಸನಿಲ್, ಮಂಗಳೂರು ಎಪಿಎಂಸಿ ಸದಸ್ಯ ಜೋಸ್ಸಿ ಮಿನೇಜಸ್, ಕಾಂಗ್ರೆಸ್ ಮುಖಂಡ ಮಿತ್ತಬೈಲು ವಾಸುದೇವ ನಾಯಕ್, ಪುರಸಭಾ ಸದಸ್ಯರಾದ ರಮಣಿ, ರತ್ನಾಕರ ದೇವಾಡಿಗ, ರಾಜೇಶ್ ಕೋಟೆಗಾರ್ ಮೊದಲಾದವರಿದ್ದರು.
