ಮೂಡುಬಿದರೆ: ಅಶಕ್ತರಿಗೆ ಹಾಗೂ ದುರ್ಬಲರಿಗೆ ಕಾನೂನಿನಲ್ಲಿ ಉಚಿತ ವ್ಯವಸ್ಥೆಯಿದೆ. ಈ ನಿಟ್ಟಿನಲ್ಲಿ ಕಾನೂನು ಪ್ರಾಧಿಕಾರಿ ನಾಗರಿಕರಲ್ಲಿ ಕಾನೂನು ಅರಿವು ಮಾಡಲು ಹೊಟ್ಟಿರುವುದು ಶ್ಲಾಘನೀಯ ಎಂದು ಮೂಡುಬಿದರೆ ಸಿವಿಲ್ ಜಡ್ಜ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾದೀಶ ಎಸ್.ಟಿ ಸತೀಶ್ ಹೇಳಿದರು.
ದ.ಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಮೂಡುಬಿದರೆ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ಮೂಡುಬಿದರೆ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ನಡೆದ, ಜನಸಾಮಾನ್ಯರಿಗೆ ಕಾನೂನು ಮಾಹಿತಿ ಶಿಬಿರ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ವಕೀಲ ಪ್ರವೀಣ್ ಲೋಬೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಹೊಸ ಕಾನೂನುಗಳು ಜಾರಿಗೆ ಬರುವುದರಿಂದ ಕಾಲಕಾಲಕ್ಕೆ ಜನಸಾಮಾನ್ಯರಿಗೆ ಕಾನೂನಿನ ಮಾಹಿತಿ ಇರಬೇಕಾದದ್ದು ಅಗತ್ಯ ಎಂದರು.
ಮೂಡುಬಿದರೆ ವಕೀಲರ ಸಂಘದ ಅಧ್ಯಕ್ಷ ಕೆ.ಆರ್ ಪಂಡಿತ್, ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರ ಸದಸ್ಯ ಬಾಹುಬಲಿ ಪ್ರಸಾದ್, ಸಹಾಯಕ ಸರ್ಕಾರಿ ಅಭಿಯೋಜಕ ದೇವೇಂದ್ರ ಉಪಸ್ಥಿತರಿದ್ದರು.
ವಕೀಲರ ಸಂಘದ ಕಾರ್ಯದರ್ಶಿ ಹರೀಶ್ ಪಿ. ಸ್ವಾಗತಿಸಿದರು. ಕೋಶಾಧಿಕಾರಿ ಜಯಪ್ರಕಾಶ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸ್ವಸ್ತಿಶ್ರೀ ಪ.ಪೂ ಕಾಲೇಜಿನ ವಿದ್ಯಾರ್ಥಿಗಳ ಭಾಗವಹಿಸಿದರು.
ಕಾರ್ಯಕ್ರಮಕ್ಕೆ ಮೊದಲು ಕಾನೂನು ಸಾಕ್ಷರತಾ ರಥವನ್ನು ಸ್ವಾಗತಿಸಲಾಯಿತು. ಬಳಿಕ ಮೂಡುಬಿದರೆ ಸಮಾಜಮಂದಿರ ಹಾಗೂ ಶ್ರೀಮಹಾವೀರ ಕಾಲೇಜಿಗೆ ರಥ ತೆರಳಿತು.
