ಮೂಡುಬಿದಿರೆ: ಪಾಲಡ್ಕ ಗ್ರಾಮದ ಶೆಡ್ಯಾ ಎಂಬಲ್ಲಿ ಬುಧವಾರ ಬೆಳಿಗ್ಗೆ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು 40 ಸಾವಿರಕ್ಕೂ ಅಧಿಕ ನಷ್ಟ ಉಂಟಾಗಿದೆ.

ಶೆಡ್ಯಾದ ಹರೀಶ್ ಎಂಬವರ ಮನೆಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯ ವೇಳೆ ಮನೆಯವರು ಇರಲಿಲ್ಲ. ಎರಡು ಕೋಣೆಯಿರುವ ಮನೆಯ ಮರಮಟ್ಟುಗಳು ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

