ಬಂಟ್ವಾಳ : ಕಾನೂನು ಮನುಷ್ಯ ಹುಟ್ಟುವ ಪೂರ್ವದಲ್ಲಿಯೇ ರೂಪಿತಗೊಂಡು ಸತ್ತ ನಂತರವೂ ಕಾನೂನು ಅನ್ವಯವಾಗುತ್ತದೆ . ತಾಯಿಯ ಹೊಟ್ಟೆಯಲ್ಲಿರುವಾಗಲೇ ಮಗುವಿಗೆ ಕಾನೂನು ಅನ್ವಯವಾಗುತ್ತದೆ . ಮನುಷ್ಯ ಜೀವನದ ಪ್ರತಿಯೊಂದು ಹಂತದಲ್ಲಿಯೂ ಕಾಯಿದೆ ದಾಖಲಾಗುತ್ತದೆ . ಜೀವನದ ಪ್ರತಿಯೊಂದು ನಡೆ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್ ಡಿ.ಆರ್ ನುಡಿದರು .

ಅವರು ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ), ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ , ಬಂಟ್ವಾಳ ಕಂದಾಯ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ತಾಲೂಕು ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಗ್ರಾಮ ಪಂಚಾಯತ್ಗಳ ಸಂಯುಕ್ತ ಆಶ್ರಯದಲ್ಲಿ ಎಸ್.ವಿ.ಎಸ್.ಪದವಿ ಕಾಲೇಜು ಬಂಟ್ವಾಳ ದಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಮಕ್ಕಳ ಹಕ್ಕು ಮತ್ತು ಆಸ್ತಿ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು . ಎಸ್.ವಿ.ಎಸ್.ಪದವಿ ಕಾಲೇಜು ಪ್ರಾಂಶುಪಾಲ ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿದ್ದರು . ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ , ಲಯನ್ಸ್ ಮಾಜಿ ಅಧ್ಯಕ್ಷ ವಾಲ್ಟರ್ ನೊರೊನ್ಹಾ ಉಪಸ್ಥಿತರಿದ್ದರು . ಉಪನ್ಯಾಸಕ ನಾರಾಯಣ ಭಂಡಾರಿ ಸ್ವಾಗತಿಸಿದರು . ಉಪನ್ಯಾಸಕ ಕಿಟ್ಟು ರಾಮಕುಂಜ ಕಾರ್ಯಕ್ರಮ ನಿರ್ವಹಿಸಿದರು .
