ಮೂಡುಬಿದರೆ: ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ಕ್ರೀಡಾಪಟುಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಬ್ರಹ್ಮಾವರ ಎಸ್‍ವಿಎಸ್ ಕಾಲೇಜಿನ ಕ್ರೀಡಾ ನಿರ್ದೇಶಕ ಚಂದ್ರಶೇಖರ ಹೆಗ್ಡೆ ಹೇಳಿದರು.
ಮೂಡುಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಳ್ವಾಸ್‍ನಲ್ಲಿ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಸಿಗುತಿದ್ದು ಭವಿಷ್ಯದಲ್ಲಿ ಇಲ್ಲಿನ ಕ್ರೀಡಾಪಟುಗಳು ಒಲಿಂಪಿಕ್ಸ್‍ನಲ್ಲಿ ಪದಕ ಗಳಿಸುವಂತಾಗಲಿ ಎಂದು ಹಾರೈಸಿದರು.
ಪ್ರೋ ಕಬಡ್ಡಿಯಲ್ಲಿ ಮಿಂಚಿದ ಸುಕೇಶ್ ಹೆಗ್ಡೆ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
mbd-march 6_2 (2)

mbd-march 6_2 (1)
ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಸ್ಮಿತಾ ಐತಾಳ್ ಅಧ್ಯಕ್ಷತೆ ವಹಿಸಿ ಮಾತನಾಡಿ ಆಳ್ವಾಸ್ ಕ್ರೀಡಾಪಟುಗಳು ವಿವಿ ಹಾಗೂ ರಾಷ್ಟ್ರಮಟ್ಟದಲ್ಲಿ ತೋರಿದ ಸಾಧನೆಯನ್ನು ವಿವರಿಸಿದರು. ಆಳ್ವಾಸ್ ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವೈಶಾಖ್ ಪ್ರತಿಜ್ಞಾವಿಧಿ ಬೋದಿಸಿದರು. ಡಾ.ಯೋಗೀಶ್ ಕೈರೋಡಿ ವಂದಿಸಿದರು. ಮಂಜುಶ್ರೀ ಕಾರ್ಯಕ್ರಮ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *