ಬಂಟ್ವಾಳ: ದೇವರ ಮೇಲಿನ ಭಕ್ತಿ ಮತ್ತು ನಂಬಿಕೆಯಿಂದ ಶರೀರವನ್ನು ದಂಡಿಸುವುದು ಸೇರಿದಂತೆ ವಿವಿಧ ರೀತಿಯಲ್ಲಿ ಭಗವಂತನ ಆರಾಧನೆ ಮಾಡುವುದು ಸನಾತನ ಹಿಂದೂ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಋಷಿ ಪರಂಪರೆಯ ಈ ಆಧ್ಯಾತ್ಮಿಕ ಪದ್ಧತಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತು, ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ದೇಶೀಯ ಸಂಸ್ಕೃತಿ ಮೇಳೈಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ, ವಿಧಾನಸಭೆ ವಿರೋಧಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

9btl-karenki

ತಾಲ್ಲೂಕಿನ ಮೂಡನಡುಗೋಡು ಗ್ರಾಮದ ಕಕೆಂಕಿ ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ರಾಜಕೀಯ ಮತ್ತು ಜಾತೀಯ ವ್ಯವಸ್ಥೆಗೆ ಮಾತ್ರ ಸಮಾಜವು ಸೀಮಿತವಾಗದೆ ರಾಷ್ಟ್ರೀಯ ವಿಚಾರದಲ್ಲಿ ಎಲ್ಲರೂ ಸಂಘಟಿತರಾಗುವುದು ದೇಶೀಯ ಧರ್ಮವಾಗುತ್ತದೆ ಎಂದು ಅವರು ವಿಶ್ಲೇಷಿಸಿದರು.
ಸುಬ್ರಹ್ಮಣ್ಯ ಸಂಸ್ಥಾನ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ವಿಗ್ರಹ ಆರಾಧನೆಗೆ ಬದಲಾಗಿ ವಿಗ್ರಹದಲ್ಲಿ ದೇವರನ್ನು ಕಾಣುವುದು ಹಿಂದೂ ಸಂಸ್ಕೃತಿಯಾಗಿದೆ ಎಂದರು.
ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್ ಮತ್ತಿತರರು ಶುಭ ಹಾರೈಸಿದರು. ಬಂಟ್ವಾಳ ತಾ.ಪಂ. ಅಧ್ಯಕ್ಷ ಯಶವಂತ ಡಿ. ಉಪಾಧ್ಯಕ್ಷೆ ವಿಲಾಸಿನಿ ಎಸ್.ಪೂಜಾರಿ, ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಪಂಜಿಕಲ್ಲು ಗ್ರಾ.ಪಂ. ಅಧ್ಯಕ್ಷ ಸಂಜೀವ ಪೂಜಾರಿ, ಪ್ರಮುಖರಾದ ಮನ್ಮಥರಾಜ್ ಪೆರಿಯಾರ್ಗುತ್ತು, ರಾಘವ ಪೊದುವಾಲ್, ಮಹೇಶ ಮುನಿಯಂಗಳ, ಕೃಷ್ಣಪ್ಪ ನಾಕ್ ಸೇಸಗುರಿ, ಜಗನ್ನಾಥ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ  ಬ್ರಿಜೇಶ್ ಶೆಟ್ಟಿ ಮತ್ತಿತರರು ಇದ್ದರು. ಜೀರ್ಣೋದ್ದಾರ ಸಮಿತಿ ಗೌರಾವಾಧ್ಯಕ್ಷ ಬಿ.ಸುರೇಶ್ ವಿ.ಬಾಳಿಗಾ ಪ್ರಾಸ್ತಾವಿಕ ಮಾತನಾಡಿದರು. ದೇವಳದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಶೆಟ್ಟಿ ದಂಡೆ ಸ್ವಾಗತಿಸಿದರು. ಪುರುಷೋತ್ತಮ ಅಂಚನ್ ವಂದಿಸಿದರು. ಕಲಾವಿದ ಎಚ್.ಕೆ. ನಯನಾಡು ಕಾರ್ಯಕ್ರಮ ನಿರೂಪಿಸಿದರು. ಇದೇ ವೇಳೆ ಶ್ರಮದಾನ ಮಾಡಿದ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಆರಂಭದಲ್ಲಿ ವೇದಮೂರ್ತಿ  ನೀಲೇಶ್ವರ ದಾಮೋದರ ತಂತ್ರಿ ಪೌರೋಹಿತ್ಯದಲ್ಲಿ ಗಣಪತಿ ದೇವರ ಪ್ರತಿಷ್ಠೆ ಮತ್ತು ನೂತನ ಸುತ್ತುಪೌಳಿ ಸಮರ್ಪಣೆ ಕಾರ್ಯಕ್ರಮ ನಡೆಯಿತು.

By suddi9

Leave a Reply

Your email address will not be published. Required fields are marked *