ಸುದ್ದಿ9 ಪೊಳಲಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಂಗಳೂರು, ಮಂಗಳೂರು ವಕೀಲರ ಸಂಘ, ಜಿಲ್ಲಾಡಳಿತ, ಕಂದಾಯ ಇಲಾಖೆ, ಜಿಲ್ಲಾ ಪಂಚಾಯತ್, ಬ್ಯಾಂಕುಗಳು, ಹಣಕಾಸು ಸಂಸ್ಥೆಗಳು, ಸಹಕಾರಿ ಸಂಘಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಮೆಗಾ ಅದಲಾತ್ ನಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ಜನತಾ ನ್ರಾಯಾಯಲಯದ ಮೂಲಕ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಶುಕ್ರವಾರ ಮಂಗಳೂರಿನ ಶ್ರೀ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ತಿಳಿಸಿದರು. ಶಕ್ರವಾರ ಪೊಳಲಿಗೆ ಭೇಟಿ ನೀಡಿ ಈ ಕುರಿತು ಜನರಿಗೆ ಮಾಹಿತಿ ನೀಡಿದರು. ಈ ಯೋಜನೆಯ ಪ್ರಮುಖ ಲಾಭಗಳೆಂದರೆ:

-

-

-

-
ನಿಮ್ಮ ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಬಹುದು. - ಈ ನ್ಯಾಯಾಲಯದಲ್ಲಿ ನೀವು ವಕೀಲರ ಮೂಲಕ ಭಾಗವಹಿಸುವ ಅಗತ್ಯವಿಲ್ಲ. ನೇರವಾಗಿ ಪಾಲ್ಗೊಳ್ಳಬಹುದು.
- ಉಭಯ ಪಕ್ಷಗಳಿಗೆ ರಾಜಿ ಸಂಧಾನ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು.
- ವ್ಯಾಜ್ಯಪೂರ್ವ ಪ್ರಕರಣಗಳನ್ನು ಕೂಡಾ ಜನತಾ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು.
- ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಗೊಳಿಸಿದಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು.
- ಮಂಗಳೂರು ವಕೀಲರ ಸಂಘದಿಂದ ಪ್ರವೀಣ್ ಕುಮಾರ್ ಅದ್ಯಪಾಡಿ, ಲತಾ ಮಣಿ, ಶೈಲೇಶ್ ಚೌಟಾ, ಬಂಟ್ವಾಳ ವಕೀಲರ ಸಂಘದಿಂದ ಸುರೇಶ್ ಪೂಜಾರಿ, ಶ್ರೀಮತಿ ಕೇಶವಿ ಗಿರೀಶ್ ಮತ್ತು ಸತೀಶ್ ಬಿ. ಭಾಗವಹಿಸಿದ್ದರು. ಬಂಟ್ವಾಳ ನ್ಯಾಯಾಲಯದ ಮೊದಲ ದರ್ಜೆ ಸಿಬ್ಬಂದಿ ಬಾಲಕೃಷ್ಣ ಉಪಸ್ಥಿತರಿದ್ದರು. ಪೊಳಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಮಾಧವ ಭಟ್, ಅರ್ಚಕ ಪರಮೇಶ್ವರ್ ಭಟ್, ಆಡಳಿತ ಮೊಕ್ತೇಸರ ತಾರನಾಥ ಆಳ್ವ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಹರೀಶ್ಚಂದ್ರ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.
