ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ನಗರ ಪ್ರದೇಶ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳು ಮತ್ತು ಕೆಲವೊಂದು ಸಾರ್ವಜನಿಕ ಸಮಸ್ಯೆಗಳ ಬಗ್ಗೆಯೂ ನಾಗರಿಕರು ಪತ್ರಿಕೆಗಳಿಗೆ ತ್ವರಿತವಾಗಿ ಸುದ್ದಿ ಚಿತ್ರ ತಲುಪಿಸಲು ‘ಸುದ್ದಿಪೆಟ್ಟಿಗೆ’ ಅನುಕೂಲಕರವಾಗಿದೆ ಎಂದು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಬಿ.ಸಿ.ರೋಡ್ ಭೂ ಅಭಿವೃದ್ಧಿ ಬ್ಯಾಂಕಿನ ಬಳಿ ಅಳವಡಿಸಲಾಗಿರುವ ನೂತನ ‘ಸುದ್ದಿ ಪೆಟ್ಟಿಗೆ’ಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯವಾದಿ ಪ್ರಸಾದ್ ಕುಮಾರ್, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಯಾನಂದ ಪೆರಾಜೆ, ನಿವೃತ್ತ ಮುಖ್ಯಶಿಕ್ಷಕ ಮಹಾಬಲೇಶ್ವರ ಹೆಬ್ಬಾರ್, ಬಳಕೆದಾರರ ವೇದಿಕೆ ಸಂಚಾಲಕ ಸುಂದರ ರಾವ್, ಸಾಹಿತಿ ವಿ.ಸು.ಭಟ್ ಮತ್ತಿತರರು ಶುಭ ಹಾರೈಸಿದರು.
ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ್, ಪದಾದಿಕಾರಿಗಳಾದ ಮೋಹನ್ ಕೆ.ಶ್ರೀಯಾನ್ ರಾಯಿ, ಲತೀಫ್ ನೇರಳಕಟ್ಟೆ, ಫಾರೂಕ್ ಗೂಡಿನಬಳಿ, ಪಿ.ಎಂ.ಆಶ್ರಫ್, ಉದ್ಯಮಿ ಶೇಕ್ ಝಹೀರ್ ಪಾಣೆಮಂಗಳೂರು ಮತ್ತಿತರರು ಉಪಸ್ಥಿತರಿದ್ದರು.
—
