ಬಂಟ್ವಾಳ: ಇತ್ತೀಚೆಗೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಮುಸ್ಲಿಂ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಪ್ರಕರಣ ಸಂಬಂಧಿಸಿ ಮೃತ ಮಹಿಳೆ ಬುಶ್ರಾಳ ಪತಿ ಇರ್ಫಾನ್ ಹಾಗೂ ಆತನ ತಂದೆ ಮಹಮ್ಮದ್ (45) ಹಾಗೂ ತಾಯಿ ಮುಮ್ತಾಝ್ (40)ರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇಮ್ರಾನ್ ಘಟನೆಯ ಬಳಿಕ ಸಾರ್ವಜನಿಕರಿಂದ ಹಲ್ಲೆಗೊಳಗಾಗಿ ಚಿಕಿತ್ಸೆಗೆಂದು ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಅಲ್ಲಿಂದ ಬಿಡುಗಡೆಗೊಳ್ಳುತ್ತಿದ್ದಂತೆಯೇ ಪೊಲೀಸರು ಬಂಧಿಸಿದರೆ ಆತನ ತಂದೆ ಹಾಗೂ ತಾಯಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಲಾಗಿದೆ. 304ಬಿ ಕಲಂ ಪ್ರಕಾರ ಇವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ ಎಂದು ಪೊಲೀಸರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *