ಮಂಗಳೂರು: ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟವೆನಿಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.30ರಿಂದ ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 100 ಪರೀಕ್ಷಾ ಕೇಂದ್ರಗಳಲ್ಲಿ 36,514 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಅವರ ಪೈಕಿ 33,337 ಶಾಲಾ ವಿದ್ಯಾರ್ಥಿಗಳು, 865 ಖಾಸಗಿ ಅಭ್ಯರ್ಥಿಗಳು ಹಾಗೂ 1825 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು ಮತ್ತು 427 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ. ಪರೀಕ್ಷೆಯು ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿದೆ. ಏ.13ರ ತನಕ ಪರೀಕ್ಷೆ ನಡೆಯಲಿದೆ.

image

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಮರ್ಪಕವಾದ ಆಸನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಇತ್ಯಾದಿ ವ್ಯವಸ್ಥೆಗಳನ್ನು ಮಾಡುವಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರು ಸ್ಥಾನಿಕ ಜಾಗತ ದಳವನ್ನು ನಿಯೋಜಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸೂಚಿಸಲಾಗಿದೆ.

By suddi9

Leave a Reply

Your email address will not be published. Required fields are marked *