ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿಗುರಿ ಯುವ ಸಂಗಮ ಯುವಕ ಮಂಡಲ ಮತ್ತು ಬೊಂಡಾಲ ಚಾರಿಟೇಬಲ್ ಟ್ರಸ್ಟಿನ ವತಿಯಿಂದ ದಿ.ಬೊಂಡಾ ಜಗನ್ನಾಥ ಶೆಟ್ಟಿ ಸ್ಮರಣಾರ್ಥ 60 ಕೆ.ಜಿ.ವಿಭಾಗದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವು ಇದೇ 4ರಂದು ರಾತ್ರಿ ಶಂಭೂರು ಸರ್ಕಾರಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಟ್ರಸ್ಟಿನ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ
