ಗದಗ: ಹೈದ್ರಾಬಾದ್ ನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ ಪಡೆದಿದ್ದು, 32 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮ ಈ ಅಪಘಾತ ಸಂಭವಿಸಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಗಂಭೀರ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, 15 ಗಾಯಗಳುಗಳಿಗೆ ಗದಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ 12 ಗಾಯಾಳುಗಳಿಗೆ ಕೊಪ್ಪಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂಧರ್ಬಿಕ ಚಿತ್ರ

