ಸುರತ್ಕಲ್ : ಕುಳಾಯಿಯಲ್ಲಿ ಬಸ್ಸೊಂದಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ 8 ಮಂದಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಬಸ್ ಪ್ರಯಾಣಿಕರನ್ನು ಹತ್ತಿಸಲು ಸ್ಟಾಪ್ನಲ್ಲಿ ನಿಂತಿದ್ದಾಗ ಲಾರಿ ಹಿಂಬದಿಯಿಂದ ಬಂದು ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ನ ಹಿಂದಿನ ಸೀಟ್ನಲ್ಲಿದ್ದ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
8 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಬಸ್ನ ಹಿಂಭಾಗಜಖಂಗೊಂಡಿದೆ.
