ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕುಕ್ಕಳ ವಲಯ, ಕುಕ್ಕಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಕುಕ್ಕಳ ಮತ್ತು ಬಸವನಗುಡಿ ಪ್ರಗತಿಬಂಧು ಒಕ್ಕೂಟಗಳು, ಕುಕ್ಕಳ ಜನಜಾಗೃತಿ ಗ್ರಾಮ ಸಮಿತಿ, ಬಸವನಗುಡಿ ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನ, ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ, ಪುಂಜಾಲಕಟ್ಟೆ ತುಳುನಾಡ ರಕ್ಷಣಾ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ ಎ.5ರಂದು ರವಿವಾರ ಸಂಜೆ 3ಕ್ಕೆ ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಲಿದೆ.
ಸಂಜೆ 3ಕ್ಕೆ ಶ್ರೀ ಸತ್ಯನಾರಾಣ ಪೂಜೆ ಪ್ರಾರಂಭ, ಮಹಾಪೂಜೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಕುಕ್ಕಳ ಸಾ.ಶ್ರೀ ಸ.ಪೂ.ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಮೊಗೆರೋಡಿ ಅವರು ಅಧ್ಯಕ್ಷತೆ ವಹಿಸಲಿರುವರು. ಪುಂಜಾಲಕಟ್ಟೆ ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಗಣಪತಿ ಭಟ್ ಕುಳಮರ್ವ ಅವರು ಧಾರ್ಮಿಕ ಉಪನ್ಯಾಸ ನೀಡಲಿರುವರು. ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಮುಖ್ಯಅತಿಥಿಯಾಗಿ ಭಾಗವಹಿಸಲಿರುವರು ಎಂದು ಒಕ್ಕೂಟ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
